ಕಳೆದ ಬಾರಿ ನೀಡಿದ್ದ ಆಶ್ವಾಸನೆ ಈಡೇರಿಸಿಲ್ಲ: ಇದು ಬಿಜೆಪಿ ಸರ್ಕಾರದ ನಿರ್ಗಮನ ಬಜೆಟ್- ಸಿದ್ಧರಾಮಯ್ಯ ಟೀಕೆ.

ಬೆಂಗಳೂರು,ಫೆಬ್ರವರಿ,17,2023(www.justkannada.in):  ಇಂದು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ಬಿಜೆಪಿ ಸರ್ಕಾರದ ನಿರ್ಗಮನ ಬಜೆಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದರು.

ಬಜೆಟ್ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ.  3,09,182 ಕೋಟಿ ರೂ. ಬಜೆಟ್ ಇದಾಗಿದೆ.  ಕಳೇದ ಬಜೆಟ್ ನಲ್ಲಿ ಏನೇನು ಕಾರ್ಯಕ್ರಮ ಘೋಷಣೆ ಮಾಡಿದ್ದರು. ಅದರಲ್ಲಿ ಹಲವು ಕಾರ್ಯಕ್ರಮಗಳನ್ನ ಜಾರಿ ಮಾಡಿಲ್ಲ. ಚುನಾವಣೆ ವೇಳೆ ಘೋಷಿಸಿದ್ದ ಶೇ.92 ರಷ್ಟು ಆಶ್ವಾಸನೆ ಈಡೇರಿಸಿಲ್ಲ. ಕಳೆದ ಬಜೆಟ್ ನಲ್ಲಿ 206 ಕಾರ್ಯಕ್ರಮ ಘೋಷಿಸಿದ್ದರು. ಜನರರಿಗೆ ಸುಳ್ಳು ಭರವಸೆ ನೀಡಿ ಕನಸಿನ ಲೋಕದಲ್ಲಿ ತೇಲಾಡಿಸಿ ನಂತರ ಯಾವುದೇ ಕೆಲಸ ಮಾಡದೆ ಭ್ರಮನಿರಸನರಾಗಿದ್ದಾರೆ ಎಂದು ಕಿಡಿಕಾರಿದರು.

ಎಸ್ ಸಿಪಿ ಮತ್ತು ಟಿಎಸ್ ಪಿ ಅನುದಾನ ಕಡಿತಗೊಳಿಸಿ ದ್ರೋಹವೆಸಗಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ 2.2 ಲಕ್ಷ ಕೋಟಿ ರೂ. ಬಜೆಟ್‌ ಗಾತ್ರವಿತ್ತು ಎಸ್ ಸಿಪಿ ಮತ್ತು ಟಿಎಸ್ ಪಿ  ಯೋಜನೆಗೆ ನಾವು 30 ಸಾವಿರ ಕೋಟಿ ರೂ. ಹಣ ನೀಡಿದ್ದೆವು. ಆದರೆ ಈಗಿನ ಬಜೆಟ್‌ ಗಾತ್ರ 3.9 ಲಕ್ಷ ಕೋಟಿ ಇದ್ದರೂ ಈ ಯೋಜನೆಗೆ ನೀಡಿರುವ ಅನುದಾನ 30 ಸಾವಿರ ಕೋಟಿಯೇ ಇದೆ. ಹಿಂದಿನ ವರ್ಷ ಖರ್ಚಾಗಿರುವ ಹಣವನ್ನೂ ಹೇಳಿಲ್ಲ, ನನ್ನ ಪ್ರಕಾರ ಈ ಯೋಜನೆಗೆ ನೀಡುವ ಅನುದಾನ ಕನಿಷ್ಠ 50 ಸಾವಿರ ಕೋಟಿ ರೂ. ಆಗಬೇಕಿತ್ತು. ಇದು ದಲಿತರಿಗೆ, ಪರಿಶಿಷ್ಟ ಜಾತಿ ಮತ್ತು ವರ್ಗದ ಜನರಿಗೆ ಮಾಡಿರುವ ದೊಡ್ಡ ದ್ರೋಹ’ವೆಂದು ವಾಗ್ದಾಳಿ ನಡೆಸಿದರು.

Key words: exit -budget – BJP –government- former CM-Siddaramaiah