ಇಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಿರೀಕ್ಷೆ ಮಾಡಬಹುದು-ಸಿಎಂ ಬಸವರಾಜ ಬೊಮ್ಮಾಯಿ.

Promotion

ನವದೆಹಲಿ,ಏಪ್ರಿಲ್,11,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ತೀವ್ರ ಕಸರತ್ತು ನಡೆಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಪಕ್ಷದ ವರಿಷ್ಠರ ನಿವಾಸಕ್ಕೆ ಪರೇಡ್ ನಡೆಸುತ್ತಿದ್ದಾರೆ.

ಇಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರನ್ನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದರು. ನಂತರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿರುವ ಸಿಎಂ ಬೊಮ್ಮಾಯಿ ಮೊದಲ ಪಟ್ಟಿ ಬಿಡುಗಡೆ ಕುರಿತು ಚರ್ಚಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಬೊಮ್ಮಾಯಿ, ಇಂದೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ನಿರೀಕ್ಷೆ ಮಾಡಬಹುದು ಎಂದು ಹೇಳಿದ್ದು ಇಂದು ರಾತ್ರಿ ವೇಳೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ.

Key words: expect – release – list – BJP candidates- today – CM Basavaraj Bommai.