ಪ್ರಧಾನಿ ಮೋದಿಗೆ ಭದ್ರತೆ ನೀಡುವಲ್ಲಿ ವಿಫಲ: ಪಂಜಾಬ್ ಸರ್ಕಾರ ವಜಾಗೊಳಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ.

ಮಂಡ್ಯ,ಜನವರಿ,5,2022(www.justkannada.in):  ಪಂಜಾಬ್ ನಲ್ಲಿ ಮೊದಲ ಚುನಾವಣಾ ರ್ಯಾಲಿಯಲ್ಲಿ  ಭಾಗವಹಿಸಲು ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಂಜಾಬ್ ಸರ್ಕಾರ ಭದ್ರತೆ ನೀಡಲು ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದ್ದು ಭದ್ರತಾ ವೈಪಲ್ಯದಿಂದ ಪ್ರಧಾನಿ ಮೋದಿ ಅವರು ಕಾರ್ಯಕ್ರಮ ರದ್ದು ಮಾಡಿ ವಾಪಾಸ್ ಆದಂತ ಘಟನೆ ನಡೆದಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಮ್ಮ ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ, ಪಂಜಾಬ್ ಸರ್ಕಾರ ಪ್ರಧಾನಿ ಮೋದಿಯವರಿಗೆ ಭದ್ರತೆ ನೀಡಲು ವಿಫಲವಾಗಿದೆ. ಹೀಗಾಗಿ ಪಂಜಾಬ್ ಸರ್ಕಾರ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ದೇಶದ ಪ್ರಧಾನ ಮಂತ್ರಿಗೆ ಗೌರವ ಕೊಡುವುದು ಎಲ್ಲಾ ಸರ್ಕಾರಗಳ ಕರ್ತವ್ಯ ಆಗಿದೆ.ಆದರೆ  ಪ್ರಧಾನಿಯವರು ಮುಕ್ತವಾಗಿ ಓಡಾಡಲು ಅವಕಾಶ ನೀಡದಿರುವುದು ಖಂಡನೀಯ. ಭದ್ರತಾ ಲೋಪದ ಬಗ್ಗೆ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಪ್ರಧಾನಿಯವರಿಗೆ ಭದ್ರತೆಯೊದಗಿಸಲು ಪಂಜಾಬ್ ಸರ್ಕಾರ ವಿಫಲವಾಗಿದೆ ಎಂದರು.

Key words: Failure –secure- PM Modi-Punjab government -CM Basavaraja Bommai