ಬಿಎಸ್ ವೈ ಮನೆಯಲ್ಲಿ ಕುಟುಂಬ ರಾಜಕಾರಣ: ಯೋಗೇಶ್ವರ್ ಗೆ ಯಾಕೆ ಮಂತ್ರಿಗಿರಿ.?- ಹೆಚ್.ವಿಶ್ವನಾಥ್ ಕಿಡಿ..

ಮೈಸೂರು,ಜನವರಿ,13,2021(www.justkannada.in):  ವಿಧಾನಪರಿಷತ್ ಸದಸ್ಯ ಸಿ.ಪಿ ಯೊಗೇಶ್ವರ್ ಗೆ ಸಚಿವ ಸ್ಥಾನ ನೀಡುವುದು ಬಹುತೇಕ ಖಚಿತ ಎನ್ನಲಾಗಿದ್ದು ಈ ಹಿನ್ನೆಲೆಯಲ್ಲಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್  ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ.jk-logo-justkannada-mysore

ಸಿಎಂ ಬಿಎಸ್ ಯಡಿಯೂರಪ್ಪ ಮನೆಯಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ. ಯೋಗೇಶ್ವರ್ ಮಂತ್ರಿ ಆಗೋಕೆ ವಿಜಯೇಂದ್ರ ಕಾರಣ. ಅದೇ ರೀತಿ ಯಡಿಯೂರಪ್ಪರ ಪ್ರತಿಷ್ಠೆ, ಗಳಿಸಿದ ಗೌರವ ಡೆಮಾಲೀಷ್ ಆಗೋಕು ವಿಜಯೇಂದ್ರರೇ ಕಾರಣ ಎಂದು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ವಿಶ್ವನಾಥ್, ಇಡೀ ವಿಧಾನಸೌಧದಲ್ಲಿ ಅವರ ಅಣ್ಣ ತಮ್ಮಂದಿರೇ ಕುಳಿತಿದ್ದಾರೆ. ಯಡಿಯೂರಪ್ಪ ಸಂಪಾದಿಸಿದ್ದ ಹೆಸರು ಹಾಳಾಗುತ್ತಿದೆ. ಎಲ್ಲದಕ್ಕೂ ಸುಮ್ಮನೆ ಹೈಕಮಾಂಡ್ ಹೆಸರು ಬಳಸಬೇಡಿ. ಕರ್ನಾಟಕಕ್ಕೆ ಯಡಿಯೂರಪ್ಪ ಅವರೇ ಹೈಕಮಾಂಡ್. ಯೋಗೇಶ್ವರ್‌ ದು  ಟೋಟಲಿ ಬ್ಲಾಕ್ ಮೇಲ್ ತಂತ್ರ. ಅವರ ಬ್ಲಾಕ್ ಮೇಲ್ ಏನಂತ ಯಾವತ್ತಾದರೂ ಒಂದು ದಿನ ಹೊರಗೆ ಬರುತ್ತೆ ಎಂದರು.Family -Politics –CM  BS Yeddyurappa- Home-MLC-H.Vishwanath -mysore

ರಾಜ್ಯದಲ್ಲಿ ಸಚಿವರಾಗೋಕೆ ಬ್ಯಾಗ್ ಹಿಡಿದಕೊಳ್ಳೋದೆ ಮಾನದಂಡವೇ.?

ಮುನಿರತ್ನ ಬದಲು ಯೋಗೇಶ್ವರ್ ಯಾಕೇ ಸಚಿವ ಕೊಡ್ತೀರಾ ಹೇಳಿ. ಕೋರ್ಟ್‌ ಗೂ ನನಗೆ ಮಂತ್ರಿ ಸ್ಥಾನ ಕೊಡೋದಕ್ಕು ಸಂಬಂಧ ಇಲ್ಲ. ಆದರೆ ಆ ಸೈನಿಕನ ಮೇಲೆ 420 ಕೇಸ್ ಇದೆ. ಅವನಿಗೆ ಸಚಿವನನ್ನಾಗಿ ಮಾಡೋಕೆ ದುಂಬಾಲು ಬಿದ್ದಿದ್ದೀರಾ. ಯಾಕೇ ಎಲ್ಲಾದರೂ ಸಿಕ್ಕಿ ಹಾಕಿಕೊಂಡಿದ್ದೀರಾ ಹೇಳಿ. ಏನಾದರೂ ಬ್ಲಾಕ್ ಮೇಲ್ ಮಾಡುತ್ತಿದ್ದಾನಾ ಅವನು. ಅವನೇನು ರಾಜೀನಾಮೆ ಕೊಟ್ನಿದ್ನಾ. ಅಥವ ನೀವೆನು ಸೈನಿಕನ ಕೈಗೊಂಬೆ ಆಗಿದ್ದೀರಾ? ರಾಜ್ಯದಲ್ಲಿ ಸಚಿವರಾಗೋಕೆ ಬ್ಯಾಗ್ ಹಿಡಿದಕೊಳ್ಳೋದೆ ಮಾನದಂಡವೇ.? ಯೋಗೇಶ್ವರ್‌ ಗೆ ಬರಿ ಬಾಂಬೆಯಲ್ಲಿ ಬ್ಯಾಗ್ ಹಿಡಿದ್ದಿದ್ದು ಬಿಟ್ಟರೆ ಮತ್ತೇನು ಮಾಡಿಲ್ಲ.  ಈ ಎಲ್ಲಾ ಬೆಳವಣಿಗೆಯಿಂದ ನೋವಾಗಿದೆ. ನಾವು ಮನುಷ್ಯರು ನಮಗೂ ಹೃದಯ ಇದೆ ನಮಗು ನೋವಾಗುತ್ತೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Key words: Family -Politics –CM  BS Yeddyurappa- Home-MLC-H.Vishwanath -mysore