ಖ್ಯಾತ ಕವಿ ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಸಿಎಂ ಬಿಎಸ್ ವೈ ಸಂತಾಪ…

Promotion

ಬೆಂಗಳೂರು, ಮಾರ್ಚ್ 6,2021(www.justkannada.in): ಖ್ಯಾತ ಕವಿ ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.jk

‘ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟ’ರು, ’ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ ಮುಂತಾದ ಹಲವರು ಪ್ರಕಾರಗಳಲ್ಲಿ  ಸಾಹಿತ್ಯ ಕೃಷಿ ಮಾಡಿ ವ್ಯಾಪಕ ಮನ್ನಣೆ ಪಡೆದಿದ್ದಾರೆ. ಅವರ ಜನಪ್ರಿಯ  ಭಾವಗೀತೆಗಳಿಂದ  ಕನ್ನಡಿಗರ ಮನೆ ಮಾತಾಗಿದ್ದರು. ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ. famous -poet -N.S Lakshminarayana Bhatta- CM BS yeddyurappa- condolences –death

ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Key words: famous -poet -N.S Lakshminarayana Bhatta- CM BS yeddyurappa- condolences –death