ಸಿಎಂ ಮನೆಗೆ ಮುತ್ತಿಗೆಗೆ ತೆರಳುತ್ತಿದ್ದ ರೈತರು ಪೊಲೀಸರ ವಶಕ್ಕೆ.

Promotion

ಬೆಂಗಳೂರು,ಜುಲೈ,11,2022(www.justkannada.in):   ಕಬ್ಬುಬೆಳೆಗಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಿಎಂ ಮನೆಗೆ ಮುತ್ತಿಗೆಗೆ ತೆರಳುತ್ತಿದ್ದ ರೈತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸಿಎಂ ಮನೆವರೆಗೆ ರ್ಯಾಲಿ ಮೂಲಕ ತೆರಳಿ ಮುತ್ತಿಗೆ ಹಾಕಲು ರೈತರು ಮುಂದಾಗಿದ್ದರು.ಈ ಹಿನ್ನೆಲೆಯಲ್ಲಿ ಸಂಗೊಳ್ಳಿ ರೈಲು ನಿಲ್ದಾಣದಲ್ಲಿ ಸಾವಿರಾರು ರೈತರು ಜಮಾಯಿಸಿದ್ದರು.

ಆದರೆ ಪ್ರತಿಭಟನೆಗೆ ಅವಕಾಶವಿಲ್ಲದ ಹಿನ್ನೆಲೆ ಪ್ರತಿಭಟನಾನಿರತ ರೈತರನ್ನ ಪೊಲೀಸರು ವಶಕ್ಕೆ ಪಡೆದಿದ್ದು ಫ್ರೀಡಂಪಾರ್ಕ್ ನಲ್ಲಿ ಧರಣಿ ನಡೆಸುವಂತೆ ಸೂಚಿಸಿದ್ದಾರೆ.

Key words: farmers –CM- house- protest-police