“ರೈತರ ಹೋರಾಟ ಪ್ರತಿಷ್ಠೆ ಆಗಬಾರದು” : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು,ಫೆಬ್ರವರಿ,10,2021(www.justkannada.in) : ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಪ್ರತಿಷ್ಠೆ ಆಗಬಾರದು. ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.jkಸುದ್ದಿಗಾರರೊಂದಿಗೆ ಮಾತನಾಡಿ ಅವರು, ರೈತರಿಗೆ ನೋವು ಹೇಳಿಕೊಳ್ಳುವ ಸ್ವಾತಂತ್ರ್ಯ ಇದೆ. ಚಳಿಲೆಕ್ಕಿಸದೆ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಗಣರಾಜ್ಯೋತ್ಸವ ದಿನದಂದು ನಡೆದ ಗಲಭೆಗೆ ಯಾರು ಕಾರಣ ಎಂಬುದು ತನಿಖೆ ನಡೆದಿದೆ ಎಂದರು.

ಖಲಿಸ್ತಾನ, ವಿದೇಶಿ ಹಣ ಬಂದಿತ್ತು ಎನ್ನುವ ಊಹಾಪೋಹಕ್ಕೆ‌ ನಾನು ಉತ್ತರ ಕೊಡುವುದಿಲ್ಲ. ಗೃಹ ಸಚಿವಾಲಯ ಈ ಬಗ್ಗೆ ತನಿಖೆ ಮಾಡುತ್ತಿದ್ದು, ಅದರ ವರದಿ ಆಧರಿಸಿ ಮತ್ತೆ ಮಾತನಾಡುತ್ತೇನೆ ಎಂದು ಹೇಳಿದರು.

ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಿಲ್ಲ

ರಾಜ್ಯದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟದ ಕುರಿತು ಮಾತನಾಡಿ, ಈ‌ ಬಗ್ಗೆ‌ ಸಿದ್ದರಾಮಯ್ಯ ಅವರಿಗೆ ಉತ್ತಮ ಮಾಹಿತಿ ಇದೆ. ಅವರೇ ಮಾತನಾಡುತ್ತಾರೆ. ರಾಜ್ಯದ ಬೆಳಗಾವಿ ಲೋಕಸಭಾ, ಮಸ್ಕಿ, ಸಿಂಧಗಿ ಹಾಗೂ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಿಲ್ಲ. ನಮ್ಮ ಬಳಿ ಚುನಾವಣೆಗೆ ಹಣ ಇಲ್ಲ. ಬೆಳಗಾವಿ ಲೋಕಸಭೆ, ಮಸ್ಕಿ, ಸಿಂಧಗಿ ಹಾಗೂ ಬಸವ ಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕುವುದಿಲ್ಲ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಸರ್ಕಾರ ಮುಗಿದ ಮೇಲೆ ನಾನ್ಯಾರಿಗೂ ನಿಂದನೆ ಮಾಡಿಲ್ಲFarmers,struggle,not,prestige,Former,Prime,Minister,H.D.Deve Gowda

2023 ರಲ್ಲಿ ರಾಜ್ಯದಲ್ಲಿ ಚುನಾವಣೆ ಎದುರಾಗಲಿದೆ. ಪಕ್ಷ ಕಟ್ಟುವುದಕ್ಕಾಗಿ ನಾನು ಸಂಪೂರ್ಣ ಭಾಗಿಯಾಗುತ್ತೇನೆ. ಕುಮಾರಸ್ವಾಮಿ ಸರ್ಕಾರ ಮುಗಿದ ಮೇಲೆ ನಾನ್ಯಾರಿಗೂ ನಿಂದನೆ ಮಾಡಿಲ್ಲ. ಪ್ರಾದೇಶಿಕ ಪಕ್ಷ ಕಟ್ಟುವುದಕ್ಕೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

key words : Farmers-struggle-not-prestige-Former-Prime-Minister-H.D.Deve Gowda