ಎರಡು ಆಟೋ ಮತ್ತು ಲಾರಿ ನಡುವೆ ಭೀಕರ ಅಪಘಾತ: ಏಳು ಮಂದಿ ದುರ್ಮರಣ.

Promotion

ವಿಜಯನಗರ,ಜೂನ್,30,2023(www.justkannada.in):  ಎರಡು ಆಟೋ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಏಳು ಮಂದಿ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.

ಘಟನೆಯಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳ್ಳಾರಿಯಿಂದ ತುಂಗಭದ್ರಾ ಡ್ಯಾಮ್​ ಕಡೆಗೆ ಆಟೋ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಅಪಘಾತಕ್ಕೀಡಾದ ಎರಡು ಆಟೋಗಳ ಪೈಕಿ ಒಂದು ಬಳ್ಳಾರಿಯ ಗೌತಮ್ ನಗರಕ್ಕೆ ಸೇರಿದ ಜನತೆ  ಹೊಸಪೇಟೆಗೆ ತುಂಗಭದ್ರ ಜಲಾಶಯ ನೋಡಲು ಹೊರಟಿದ್ದರು. ಒಂದೇ ಆಟೋದಲ್ಲಿ 20 ಜನರಿದ್ದರು ಎನ್ನಲಾಗಿದೆ. ಈ ಇಪ್ಪತ್ತು ಜನರ ಪೈಕಿ ಶಾಶಮ್ಮ ಎಂಬ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಮತ್ತೊಂದು ಆಟೋದಲ್ಲಿದ್ದ ಐವರು ಮೃತಪಟ್ಟಿದ್ದಾರೆ.

ಕೆಲವು ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ತೀವ್ರವಾಗಿ ಗಾಯಗೊಂಡವರನ್ನು ಬಳ್ಳಾರಿಯ ವಿಮ್ಸ್ ಗೆ ರವಾನಿಸಲಾಗಿದೆ. ಸ್ಥಳಕ್ಕೆ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Fatal accident –between- two -autos – lorry- Seven dead