ಫೆ.೨೮ ರಂದು ಮೈಸೂರು ಜಿಲ್ಲೆಯ ಬ್ರಾಹ್ಮಣರ “ವಿಪ್ರ ಸಮ್ಮಿಲನ”

Promotion

ಮೈಸೂರು,ಫೆಬ್ರವರಿ,26,2021(www.justkannada.in) : ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದಿಂದ ಸಿಂಧೂರ ಕನ್ವೆನ್ಷನ್ ಹಾಲ್ ನಲ್ಲಿ ಫೆ.೨೮ ರಂದು ಮೈಸೂರು ಜಿಲ್ಲೆಯ ಬ್ರಾಹ್ಮಣರ “ವಿಪ್ರ ಸಮ್ಮಿಲನ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಿ.ಟಿ ಪ್ರಕಾಶ್ ಹೇಳಿದರು.

jkಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಶ್ರೀ ವಿಶ್ವ ಪ್ರಸನ್ನತೀರ್ಥ ಶ್ರೀಪಾದರು ಕಾರ್ಯಕ್ರಮದ ಸಾನ್ನಿಧ್ಯವಹಿಸಲಿದ್ದಾರೆ.

february ೨೮-Mysore-District-Brahmans-"Vipra sammilan"

ಸಮುದಾಯದ ಸಂಘಟನಾ ದೃಷ್ಠಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಶಿಕ್ಷಣ, ಉದ್ಯೋಗ, ಧಾರ್ಮಿಕ ಕಾರ್ಯಕ್ರಮಗಳು ಮತ್ತು ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮದಲ್ಲಿ ಚರ್ಚೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

key words : february ೨೮-Mysore-District-Brahmans-“Vipra sammilan”