“ಹೆಣ್ಣಾಗಿ ಹುಟ್ಟಿ ಬದುಕುವುದೇ ಸವಾಲು” : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು,ಮಾರ್ಚ್,16,2021(www.justkannada.in)  : ಮಹಿಳೆಯರು ಸವಾಲು ಸ್ವೀಕರಿಸಬೇಕು ಎಂಬುದು ಸರಿಯಲ್ಲ. ಹೆಣ್ಣಾಗಿ ಹುಟ್ಟಿ ಬದುಕುವುದೇ ಸವಾಲು ಎನ್ನುವಂತ್ತಾಗಿದೆ. ಹೆಣ್ಣು ಭ್ರೂಣ ಹತ್ಯೆ ತಪ್ಪು. ಈ ಕುರಿತು ಮಹಿಳೆಯರು ಎಚ್ಚರಿಕೆವಹಿಸಬೇಕು. ಮನೆಯಿಂದಲೇ ಮಕ್ಕಳಲ್ಲಿ ಸಮಾನತೆಯ ಪಾಠ ಕಲಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಭಿಪ್ರಾಯವ್ಯಕ್ತಪಡಿಸಿದರು.jkಮಾನಸಗಂಗೋತ್ರಿಯ ವಿಜ್ಞಾನಭವನದಲ್ಲಿ ಮೈಸೂರು ವಿವಿ ಮಹಿಳಾ ಉದ್ಯೋಗಿಗಳ ಸಮುದಾಯ, ಮಹಿಳಾ ಅಧ್ಯಯನ ಕೇಂದ್ರ, ಮಹಿಳಾ ಸಮಸ್ಯೆಗಳನ್ನು ನಿಭಾಯಿಸುವ ವೇದಿಕೆ ಮತ್ತು ಮೈತ್ರಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 110ನೇ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ಬೌದ್ಧಿಕ ಸಾಮಾರ್ಥ್ಯಕ್ಕೆ ಹೆಚ್ಚಿನ ಒತ್ತು

ಇತಿಹಾಸವನ್ನು ನೋಡಿದರೆ ಹಿಂದೆ ದೈಹಿಕ ಸಾಮಾರ್ಥ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿತ್ತು. ಆದರೆ, ಪ್ರಸ್ತುತ ಬೌದ್ಧಿಕ ಸಾಮಾರ್ಥ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಹೀಗಾಗಿ, ಮಹಿಳೆಯರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಅಡುಗೆ ಮನೆ, ಕುಟುಂಬ ನಿರ್ವಹಣೆಯಷ್ಟೇ ಅವರ ಬದುಕು 

Female-Born-challenge-survive-District-Collector-Rohini Sindhuri

ಮಹಿಳೆಯರ ಅಭಿವೃದ್ಧಿಗೆ ಪೋಷಕರ ಸಹಕಾರ ಬಹಳ ಪ್ರಮುಖವಾಗಿದೆ. ಹಿಂದೆ ಹೆಣ್ಣು ಮಕ್ಕಳಿಗೆ ಚಿಕ್ಕವಯಸ್ಸಿಗೆ ಮದುವೆ ಮಾಡಲಾಗುತ್ತಿತ್ತು. ಅಡುಗೆ ಮನೆ, ಕುಟುಂಬ ನಿರ್ವಹಣೆಯಷ್ಟೇ ಅವರ ಬದುಕು ಎನ್ನುವಂತ್ತಾಗಿತ್ತು. ಆದರೆ, ಕಾಲಾನಂತರದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದ್ದರಿಂದ ಬದಲಾವಣೆ ಸಾಧ್ಯವಾಗಿದೆ ಎಂದು ಹೇಳಿದರು.

ಮಹಿಳೆಯರು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ

ಮಹಿಳೆಯರು ಮನೆ ಸೇರಿದಂತೆ ತಮ್ಮ ಸುತ್ತಮುತ್ತಲಿನಲ್ಲಿರುವವರಿಗೆ ಬೆಂಬಲ, ಪ್ರೋತ್ಸಾಹ ನೀಡುವ ಕಾರ್ಯ ಮಾಡಬೇಕು. ಪ್ರಸ್ತುತ ಒತ್ತಡದ ಬದುಕಿನಲ್ಲಿ ವೃತ್ತಿ ಹಾಗೂ ಕುಟುಂಬದ ನಿರ್ವಹಣೆಯ ಜೊತೆಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಮಹಿಳೆಯರು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಯೋಗ, ವ್ಯಾಯಾಮ, ಧ್ಯಾನ ಹಾಗೂ ಆಗಾಗ ಆರೋಗ್ಯ ತಪಾಸಣೆಯ ಮೂಲಕ ಆರೋಗ್ಯದ ಕಡೆ ಗಮನಕೊಡಿ. ಪೌಷ್ಠಿಕವಾದ ಆಹಾರ ಸೇವಿಸಬೇಕು. ಆಸಕ್ತಿಯ ಕ್ಷೇತ್ರದಲ್ಲಿ ತೊಡಗಿಕೊಳ್ಳಿ ಎಂದು ತಿಳಿಸಿದರು.

 Female-Born-challenge-survive-District-Collector-Rohini Sindhuri

ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಧ್ಯಕ್ಷತೆವಹಿಸಿದ್ದರು. ಶ್ರೀ ಜಯದೇವ ಆಸ್ಪತ್ರೆ ಮಕ್ಕಳ ಹೃದ್ರೋಗ ಮುಖ್ಯಸ್ಥರಾದ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ, ಕುಲಸಚಿವ ಪ್ರೊ.ಆರ್.ಶಿವಪ್ಪ ಇತರರು ಉಪಸ್ಥಿತರಿದ್ದರು.

ENGLISH SUMMARY….

“Being born as a woman and leading a life itself is a challenge”: DC Rohini Sindhuri
Mysuru, Mar. 16, 2021 (www.justkannada.in): “It is incorrect to say that women should accept challenges. Being born as a girl and living itself has become a challenge. Female foeticide is a crime. Women should be careful. They should teach gender equality at home,” opined Rohini Sindhuri, Deputy Commissioner, Mysuru.
She inaugurated the 110th International Women’s Day program organized by the University of Mysore Women Employees Forum, Women Research Centre, Women’s Grievances Redressal Forum, in association with the MYTRI, held at the Vignana Bhavana, in Manasagangotri.
“When we look at history we can see that during earlier days physical capabilities were being given more prominence. But, today knowledge is more important. Hence, women should utilize it properly. Parents’ cooperation is very much needed for the development of women. However, the scenario has changed today. Along with managing the stress of work at home, women also have to manage physical and mental stress and health,” she added.
She also advised the women to give more importance to personal health by engaging in yoga, exercises, meditation, and undergoing health checkups regularly.Female-Born-challenge-survive-District-Collector-Rohini Sindhuri
Prof. G. Hemanth Kumar, Vice-Chancellor, University of Mysore, Dr. Vijayalakshmi Balekundri, Head, Child Cardiology, Sri Jayadeva Hospital, Prof. R.Shivappa, Registrar, University of Mysore were present on the occasion.
Keywords: Women/ Mysuru DC/ Rohini Sindhuri/ challenge/ International Women’s Day

key words : Female-Born-challenge-survive-District-Collector-Rohini Sindhuri