ರಸಗೊಬ್ಬರ ಕುರಿತ ಸಿದ್ದರಾಮಯ್ಯ ಟ್ವೀಟ್ ಶುದ್ಧ ಸುಳ್ಳು : ಸಚಿವ ಬಿ.ಸಿ.ಪಾಟೀಲ್

Promotion

ಬೆಂಗಳೂರು,ಏಪ್ರಿಲ್,18,2021(www.justkannada.in) : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ‌ಹೇಳಿರುವ ಹಳೆಯ ದಾಸ್ತಾನಿನ ರಸಗೊಬ್ಬರವನ್ನು ಹಳೆಯ ದರದಲ್ಲಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಸೂಚನೆಗೆ ತದ್ವಿರುದ್ಧವಾಗಿ ರಾಜ್ಯ ಕೃಷಿ ಇಲಾಖೆ ಆದೇಶ ಹೊರಡಿಸಿದೆ ಎಂಬುದು ಶುದ್ಧ ಸುಳ್ಳು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.jk‌ಕೇಂದ್ರ‌ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡರ ಹೇಳಿಕೆ ವಿರುದ್ಧ ಯಾವುದೇ ಆದೇಶ ರಾಜ್ಯ ಕೃಷಿ ಇಲಾಖೆ‌ ಹೊರಡಿಸಿಲ್ಲ ಎಂದಿದ್ದಾರೆ.

ಹಳೆಯ ರಸಗೊಬ್ಬರ ದಾಸ್ತಾನನ್ನು ಹಳೆಯ ದರದಲ್ಲೇ ಮಾರಾಟ ಮಾಡಬೇಕೆಂದು ರಸಗೊಬ್ಬರ ಮಾರಾಟಗಾರರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಈ ಬಗ್ಗೆ ವ್ಯಾಪಕ ಪ್ರಚಾರ ಸಹ ಮಾಡಲಾಗುತ್ತಿದೆ. ಆದರೆ, ಇಲ್ಲ‌ಸಲ್ಲದ ಹೇಳಿಕೆಗಳನ್ನು ನೀಡುವ ಮೂಲಕ ಸಿದ್ದರಾಮಯ್ಯ ರಾಜ್ಯದ ರೈತರ ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Fertilizer-About-Siddaramaiah-tweeted-Pure-False-Minister-B.C.Patel

ರಸಗೊಬ್ಬರ ಮಾರಾಟಗಾರರು ಯಾವುದೇ ಕಾರಣಕ್ಕೂ ದಾಸ್ತಾನು ಇರುವ ಹಳೆಯ ರಸಗೊಬ್ಬರವನ್ನು ಹೊಸದರದಲ್ಲಿ ವಿತರಿಸದೇ ಹಳೆಯ ದಾಸ್ತಾನನ್ನು ಹಳೆಯ ದರದಲ್ಲಿಯೇ ಮಾರಾಟ ಮಾಡಬೇಕೆಂದು ಎಂದು ಸೂಚನೆ ನೀಡಿದ್ದಾರೆ.

key words : Fertilizer-About-Siddaramaiah-tweeted-Pure-False-Minister-B.C.Patel