ಆತ್ಮನಿರ್ಭರ ಯೋಜನೆಯಡಿ ಸಹಕಾರ ಕ್ಷೇತ್ರಕ್ಕೆ 4 ಸಾವಿರ ಕೋಟಿ ಅನುದಾನ : ಸಚಿವ ಎಸ್.ಟಿ.ಸೋಮಶೇಖರ್…

ಮೈಸೂರು,ಡಿಸೆಂಬರ್,16,2020(www.justkannada.in) :  ಪ್ರಧಾನಿ ನರೇಂದ್ರ ಮೋದಿ ವಿಶ್ವ ಮನ್ನಣೆ ಗಳಿಸಿದ್ದಾರೆ. ಪ್ರಧಾನಿಯವರ ಜನಔಷಧಿ ಕಾರ್ಯಕ್ರಮ ಎಲ್ಲರಿಗೂ ತಲುಪುತ್ತಿದೆ. ಸಹಕಾರ ಕ್ಷೇತ್ರಕ್ಕೆ ಕೇಂದ್ರ ಹಲವು ಯೋಜನೆಗಳನ್ನು ರೂಪಿಸಿದೆ. ಆತ್ಮನಿರ್ಭರ ಯೋಜನೆಯಡಿಯಲ್ಲಿ ಸಹಕಾರ ಕ್ಷೇತ್ರಕ್ಕೆ 4ಸಾವಿರ ಕೋಟಿ ನೀಡಲಾಗಿದೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಸಹಕಾರ ಕ್ಷೇತ್ರಕ್ಕೆ ಕೇಂದ್ರವು ವಿಶೇಷ ಅನುದಾನ ನೀಡುತ್ತಿದೆ. ಆತ್ಮನಿರ್ಭರ ಯೋಜನೆಯಡಿಯಲ್ಲಿ ಸಹಕಾರ ಕ್ಷೇತ್ರಕ್ಕೆ 4ಸಾವಿರ ಕೋಟಿ ನೀಡಲಾಗಿದೆ. ರಾಜ್ಯದ ಎಲ್ಲಾ ಪ್ರಜೆಗಳಿಗೂ ಈ ಯೋಜನೆ ತಲುಪಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ನನ್ನ ಬೆಳೆ-ನನ್ನ ಬೆಲೆ ಎಂಬ ಸ್ವಾತಂತ್ರ್ಯವನ್ನು ರೈತರಿಗೆ ನೀಡಿದೆ

ಎಪಿಎಂಸಿ ಕಾಯ್ದೆ ಬದಲಾವಣೆ ಮಾಡಿ ರೈತರಿಗೆ ಅನುಕೂಲ ಮಾಡಿದ್ದಾರೆ. ರೈತ ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರುವ ಅವಕಾಶ ನೀಡಲಾಗಿದೆ. ನನ್ನ ಬೆಳೆ-ನನ್ನ ಬೆಲೆ ಎಂಬ ಸ್ವಾತಂತ್ರ್ಯವನ್ನು ರೈತರಿಗೆ ನೀಡಲಾಗಿದೆ ಎಂದರು.

ಜನವರಿ 5ರಿಂದ ರಾಜ್ಯಾದ್ಯಂತ ಪ್ರವಾಸ ಎಪಿಎಂಸಿ ಕಾಯ್ದೆ ಕುರಿತು ಜಾಗೃತಿ

field-cooperation-center-many-projects-formed-Minister-S.T. Somashekhar

ರೈತರ ಬೆಳೆಗಳಿಗೆ ಕೇಂದ್ರದಿಂದ ವಿಶೇಷ ಬೆಂಬಲ ಬೆಲೆ ನೀಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಎಪಿಎಂಸಿ ಮುಚ್ಚುವುದಿಲ್ಲ. ಎಪಿಎಂಸಿ ಗಳಿಗೆ ಮೂಲಭೂತ ಸೌಕರ್ಯಗಳ ಕೊಟ್ಟು ಅಭಿವೃದ್ಧಿ ಮಾಡಲಾಗುತ್ತಿದೆ. ಅಪಪ್ರಚಾರಕ್ಕೆ ಯಾರು ಕೂಡಾ ಕಿವಿಗೊಡಬಾರದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಎಪಿಎಂಸಿ ಕಾಯ್ದೆ ಬಗ್ಗೆ ಜನರಿಗೆ ತಿಳಿಸುತ್ತೇವೆ. ಜನವರಿ 5ರಿಂದ ರಾಜ್ಯಾದ್ಯಂತ ಪ್ರವಾಸ ಆರಂಭಿಸುತ್ತೇವೆ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

key words : field-cooperation-center-many-projects-formed-Minister-S.T. Somashekhar