ಎರಡು ಗುಂಪುಗಳ ನಡುವೆ ಮಾರಾಮಾರಿ: ಇಬ್ಬರು ಸಾವು.

Promotion

ಕೊಪ್ಪಳ,ಆಗಸ್ಟ್,11,2022(www.justkannada.in): ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಗಲಾಟೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 60 ವರ್ಷದ ಯಂಕಪ್ಪ, 22 ವರ್ಷದ ಭಾಷಾಸಾಬ್ ಮೃತಪಟ್ಟವರು. ಘಟನೆಯಲ್ಲಿ ಧರ್ಮಣ್ಣಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕ್ಷುಲ್ಲಕ ಕಾರಣಕ್ಕೆ  ಎರಡು ಗುಂಪುಗಳ ನಡುವೆ ಮಾರಾಮಾರಿ ಇಬ್ಬರು ಬಲಿಯಾಗಿದ್ದಾರೆ. ಕನಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: fight-between -two –groups-Two -died -koppal