ಚಲನಚಿತ್ರ ನಿರ್ದೇಶಕ, ವನ್ಯಜೀವಿ ಛಾಯಾಗ್ರಾಹಕ ಕೆ.ಎನ್. ಮೋಹನ್ ಕುಮಾರ್ ನಿಧನ

Promotion

ಬೆಂಗಳೂರು, ಮೇ 24, 2022 (www.justkannada.in): ಕನ್ನಡ ಚಲನಚಿತ್ರ ನಿರ್ದೇಶಕ, ವನ್ಯಜೀವಿ ಛಾಯಾಗ್ರಾಹಕ ಕೆ.ಎನ್. ಮೋಹನ್ ಕುಮಾರ್(56)  ಇಂದು ನಿಧನರಾಗಿದ್ದಾರೆ.

ಎನ್.ಆರ್.ಕಾಲೋನಿಯ ರಾಮಲೀಲಾ ಅಪಾರ್ಟ್‍ಮೆಂಟ್‍ನಲ್ಲಿ ನೆಲೆಸಿದ್ದ ಮೋಹನ್ ಅವರು, ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸ್ನಾನದ ಕೋಣೆಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಸಮೀಪದ ರಂಗ ದೊರೈ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತ ಮೋಹನ್ ಕುಮಾರ್ ಅವರಿಗೆ ತಾಯಿ ಕಮಲಮ್ಮ, ಪತ್ನಿ ಹಾಗೂ ನಟಿ, ನಿರೂಪಕಿ ವತ್ಸಲಾ ಮೋಹನ್, ಪುತ್ರಿ ಮತ್ತು ನಟಿ ಅನನ್ಯಾ ಮೋಹನ್ ಇದ್ದಾರೆ.