ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲು…

Promotion

ಕೊಡಗು,ಜನವರಿ,8,2021(www.justkannada.in):   ಕೊಡವರು ಗೋ ಮಾಂಸ ತಿನ್ನುತ್ತಾರೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.jk-logo-justkannada-mysore

ಕೊಡವರು ಗೋ ಮಾಂಸ ತಿನ್ನುತ್ತಾರೆ ಎಂಬ ಹೇಳಿಕೆ ನೀಡಿದ್ದ  ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ  ರವಿ ಕುಶಲಪ್ಪ ಎಂಬುವವರು ದೂರು ನೀಡಿದ್ದರು.  ಮಾಜಿ ಸಿಎಂ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ ಕೊಡವರ ಭಾವನೆಗೆ ಧಕ್ಕೆ ತರುತ್ತದೆ. ಹೀಗಾಗಿ ಇವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಿದ್ದರು.

FIR- filed- against -former CM- Siddaramaiah
siddaramaih#profile..

ಈ ಹಿನ್ನೆಲೆಯಲ್ಲಿ ದೂರು ಆಧರಿಸಿ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

 

Key words: FIR- filed- against -former CM- Siddaramaiah