ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐನಿಂದ ಎಫ್ ಐಆರ್ ದಾಖಲು…

ಬೆಂಗಳೂರು ಅಕ್ಟೋಬರ್,5,2020(www.justkannada.in): ಇಂದು ಬೆಳ್ಳಂಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನಿವಾಸ ಸೇರಿ ಹಲವೆಡೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸುತ್ತಿದ್ದು ಈ ನಡುವೆ ಸಿಬಿಐ ಘಟಕದಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.jk-logo-justkannada-logo

ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಬೆಂಗಳೂರಿನ ಸಿಬಿಐ ಘಟಕದಲ್ಲಿ  ಡಿ.ಕೆ ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಭ್ರಷ್ಟಾಚಾರ ತಡೆಕಾಯ್ದೆಯಡಿ ಸಿಬಿಐ ಎಫ್ ಐಆರ್ ದಾಖಲಿಸಿದೆ.FIR -filed - CBI –against- KPCC President- DK Sivakumar.

ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ ಶಿವಕುಮಾರ್ ಮನೆ ಸೇರಿ ಹಲವೆಡೆ  ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಮತ್ತೊಂದೆ, ಸಂಸದ ಡಿ.ಕೆ ಸುರೇಶ್ ಅವರ ಕನಕಪುರ ತಾಲೂಕಿನ ಕೆಂಚೇನಹಳ್ಳಿ ಮನೆ, ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ಬೆಳಿಗೆ 6 ಗಂಟೆಗೆ ದಾಳಿ ಮಾಡಿದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Key words: FIR -filed – CBI –against- KPCC President- DK Sivakumar.