ಮಂಗಳೂರು-ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ತಪ್ಪಿದ ಭಾರಿ ಅನಾಹುತ

Promotion

ಬೆಂಗಳೂರು, ಜನವರಿ 17, 2021 (www.justkannada.in): ಮಂಗಳೂರು-ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಆದರೆ ಎಲ್ಲ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸರಕುಗಳಿದ್ದ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರ ಮುನ್ನೆಚ್ಚರಿಕೆಯಿಂದ ಭಾರಿ ಅಪಾಯ ತಪ್ಪಿದೆ.
ಇಂದು ಬೆಳಿಗ್ಗೆ 7.45 ರ ಸುಮಾರಿಗೆ ಈ ಘಟನೆ ನಡೆದಿದೆ.

ಬೆಂಕಿಯನ್ನು ಗಮನಿಸಿದ ರೈಲಿನಲ್ಲಿದ್ದ ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದು ರೈಲು ನಿಲ್ಲಿಸಿದ್ದಾರೆ.
ಬೆಂಕಿ ಹಬ್ಬಿದ್ದ ಬೋಗಿಯನ್ನು ಇತರೆ ಬೋಗಿಗಳಿಂದ ಬೇರ್ಪಡಿಸಲಾಗಿದೆ. ಬೆಂಕಿಯನ್ನು ನಂದಿಸಲು ಸ್ಥಳೀಯರು, ರೈಲು ಪ್ರಯಾಣಿಕರುಮತ್ತು ಅಗ್ನಿಶಾಮಕ ಸಿಬ್ಬಂದಿ ಒಟ್ಟಾಗಿ ಕಾರ್ಯಾಚರಣೆ ನಡೆಸಿದ್ದಾರೆ.