ಬೆಳ್ಳಂದೂರು  ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಹಲವು ಮಹತ್ವದ ದಾಖಲೆಗಳು ಭಸ್ಮ…?

Promotion

ಬೆಂಗಳೂರು,ಮೇ,3,2019(www.justkannada.in): ಬೆಂಗಳೂರಿನ ಬೆಳ್ಳಂದೂರು ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಹಲವು ಮಹತ್ವದ ದಾಖಲೆಗಳು ಸುಟ್ಟು ಭಸ್ಮವಾಗಿವೆ ಎಂದು ಹೇಳಲಾಗುತ್ತಿದೆ.

ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಮಹದೇವಪುರ ವಲಯದ ಬೆಳ್ಳಂದೂರು ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕಚೇರಿಯಲ್ಲಿದ್ದ ಹಲವು ದಾಖಲೆಗಳು ಸುಟ್ಟುಹೋಗಿವೆ ಎಂದು ಶಂಕಿಸಲಾಗಿದೆ.  ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಅಗ್ನಿ ಅವಘಡದಿಂದ ಹಲವು ಅನುಮಾನಗಳು ಹುಟ್ಟಿಕೊಂಡಿದೆ. ಅಗ್ನಿ ಅವಘಡ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವಾಗಿ ನಡದಿದೆಯೋ ಎಂಬ ಅನುಮಾನ ಮೂಡಿದೆ.

Key words: Fire – BBMP office- Bellandur-important -documents – burned.