ರಾಸಾಯನಿಕ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ 8 ಮಂದಿ ಸಾವು..

kannada t-shirts

ಉತ್ತರ ಪ್ರದೇಶ,ಜೂನ್,4,2022(www.justkannada.in): ರಾಸಾಯನಿಕ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು 8 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಹಾಪುರ್ ನಗರದಲ್ಲಿ ಈ ಘಟನೆ ನಡೆದಿದೆ. ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ ನಂತರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ 8 ಮಂದಿ ಸಾವನ್ನಪ್ಪಿದ್ದು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.Hospital fire-4 Corona-Infected-Death

ಈ ಕುರಿತು ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ  ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಸಾವುನೋವುಗಳು ಸಂಭವಿಸುವ ಆತಂಕವಿದೆ ಎನ್ನಲಾಗಿದೆ.

Key words: fire-Chemical- Factory –death-8 member

 

website developers in mysore