ಮೈಸೂರಿನ ಕಾರು ಶೋರೂಂಗೆ ಬೆಂಕಿ: 10ಕ್ಕೂ ಹೆಚ್ಚು ಕಾರುಗಳಿಗೆ ಹಾನಿ

Promotion

ಮೈಸೂರು, ಡಿಸೆಂಬರ್ 26, 2021 (www.justkannada.in): ಮೈಸೂರಿನ‌ ಕಾರು ಶೋರೂಂವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ನಗರದ ಜೆಎಲ್ ಬಿ ರಸ್ತೆಯಲ್ಲಿರುವ ಶೋರೂಂ ಅದ್ವೈತ ಹೋಂಡಾ ಶೋರೂಂ ನಲ್ಲಿ ಬೆಂಕಿ ತಗುಲಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು.

ಮೂರು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು. ಈ ಅವಘಡದಿಂದ 10ಕ್ಕೂ ಹೆಚ್ಚು ಕಾರುಗಳಿಗೆ ಹಾನಿಯಾಗಿದೆ.

ಭಾನುವಾರವಾದ ಕಾರಣ ಕಡಿಮೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದರು. ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ಸಿಬ್ಬಂದಿ ನಿರತರಾಗಿದ್ದಾರೆ.