ರಾಷ್ಟ್ರೀಯ ವಿಪತ್ತು ಘೋಷಣೆಗಿಂತ ಪರಿಹಾರ ನೀಡುವುದು ನಮ್ಮ ಮೊದಲ ಆದ್ಯತೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ…

ಬೆಂಗಳೂರು,ಆ,14,2019(www.justkannada.in): ರಾಜ್ಯದಲ್ಲಿ ಭೀಕರ ಪ್ರವಾಹದಿಂದ ಜನ ತತ್ತಿರಿಸಿರುವ ಹಿನ್ನೆಲೆ  ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಲಿ ಎಂದು ಆಗ್ರಹ ಕೇಳಿ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡುವುದಕ್ಕಿಂತ  ಪರಿಹಾರ ನೀಡುವುದು ನಮ್ಮ ಮೊದಲ ಆದ್ಯತೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿ  ಶಾಸಕ ಜಗದೀಶ್ ಶೆಟ್ಟರ್ ಚರ್ಚೆ ನಡೆಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಬಂದು ವೈಮಾನಿಕ ಸಮೀಕ್ಷೆ ಮಾಡಿ ಹೋಗಿದ್ದಾರೆ. ಶೀಘ್ರವೇ ನೆರೆ ಪರಿಹಾರ ಬಿಡುಗಡೆಯಾಗಲಿದೆ. ಕೇಂದ್ರದಿಂದ ಹೆಚ್ಚುವರಿ ಪರಿಹಾರ ಸಿಗುವ ವಿಶ್ವಾಸವಿದೆ ಎಂದರು.

ರಾಷ್ಟ್ರೀಯ ವಿಪತ್ತು ಘೋಷಣೆ ಏನೇ ಇರಲಿ. ಮೊದಲು ನೆರೆ ಸಂತ್ರಸ್ತರಿಗೆ ಪರಿಹಾರ ಸಿಗಬೇಕು. ಪ್ರಧಾನಿ ಮೋದಿ ಅವರು  ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ರೆ ಒಳ್ಳೆಯದು. ಆದರೆ ಇದು ಗೃಹ ಇಲಾಖೆ ವ್ಯಾಪ್ತಿಗೆ ಒಳಪಡುವುದರಿಂದ  ಅಮಿತ್ ಶಾ ಅವರು ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಶೀಘ್ರವೇ ಪರಿಹಾರ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: first -priority – provide -relief – neighboring victims  – Jagadish Shettar.