ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಐವರು ಸಜೀವ ದಹನ…

ಆಂಧ್ರ ಪ್ರದೇಶ,ಸೆ,14,2019(www.justkannada.in):  ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಐವರು ಸಜೀವ ದಹನವಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಆಂಧ್ರದ ಚಿತ್ತೂರು ತಾಲ್ಲೂಕಿನ ಗಂಗಾವರಂ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಒಂದೇ ಕುಟುಂಬದ ಜಾಹ್ನವಿ, ಕಲಾ,ಪವನ್, ರಾಮ್, ಸಾಯಿಅಶ್ರುತ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.  ಮೃತಪಟ್ಟವರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳು ಎನ್ನಲಾಗುತ್ತಿದೆ. ತಿರುಪತಿ ಪ್ರವಾಸಕ್ಕೆಂದು ತೆರಳಿ ವಾಪಾಸ್ ಬೆಂಗಳೂರಿಗೆ ಆಗಮಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಐವರು ಕಾರಿನಲ್ಲೇ ಸಜೀವದಹನವಾಗಿದ್ದು ಓರ್ವ ಗಂಭೀರ ಗಾಯಗೊಂಡಿದ್ದಾನೆ ಎನ್ನಲಾಗಿದೆ.

Key words: five – burnt- alive – fire – moving car