ಮುಂದಿನ ತಿಂಗಳು ಭಾರತದಲ್ಲಿ ಐದು ಲಕ್ಷ ಕೊರೊನಾ: ತಜ್ಞರ ಎಚ್ಚರಿಕೆ

Promotion

ಬೆಂಗಳೂರು, ಜನವರಿ 09, 2022 (www.justkannada.in): ಮುಂದಿನ ತಿಂಗಳು ಭಾರತದಲ್ಲಿ ಐದು ಲಕ್ಷ ಕೊರೊನಾ ಪ್ರಕರಣಗಳು ಪತ್ತೆಯಾಗಲಿವೆ ಎಂಬ ಆಘಾತಕಾರಿ ಮಾಹಿತಿಯನ್ನು ತಜ್ಞರು ನೀಡಿದ್ದಾರೆ.

ಪ್ರಸ್ತುತ ಕರ್ನಾಟಕ ಸೇರಿದಂತೆ ಕರ್ನಾಟಕದಾದ್ಯಂತ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಕೂಡ ಕರೊನಾ ಭಾರಿ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಇದನ್ನು ಗಮನಿಸಿದರೆ ಮುಂದಿನ ವರ್ಷ ಇದು ಅತೀ ಹೆಚ್ಚಾಗುವ ಸಾಧ್ಯತೆ ಇದೆ.

ಆರೋಗ್ಯ ಮೆಟ್ರಿಕ್ಸ್ ಮತ್ತು ಮೌಲ್ಯಮಾಪನ ಸಂಸ್ಥೆಯ ನಿರ್ದೇಶಕ ಡಾ. ಕ್ರಿಸ್ಟೋಫರ್ ಮುರ್ರೆ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಭಾರತದಲ್ಲಿ ಮುಂದಿನ ತಿಂಗಳಲ್ಲಿ ಗರಿಷ್ಠ 5 ಲಕ್ಷ ಕೋವಿಡ್‌ ಪ್ರಕರಣಗಳು ದಾಖಲಾಗಬಹುದು. ಆದರೆ ಇದರ ತೀವ್ರತೆ ಕಡಿಮೆ ಇರುವುದರಿಂದ ಹೆಚ್ಚಿನ ಆತಂಕ ಪಡಬೇಕಿಲ್ಲ ಎಂದು ತಿಳಿಸಿದ್ದಾರೆ.