Friday, September 18, 2026

BDA Apartments

ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್’ನಲ್ಲಿ ಒಂದೇ ಕುಟುಂಬದ ಐವರ ಬರ್ಬರ ಹತ್ಯ...
Home Crime ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್’ನಲ್ಲಿ ಒಂದೇ ಕುಟುಂಬದ ಐವರ ಬರ್ಬರ ಹತ್ಯೆ

ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್’ನಲ್ಲಿ ಒಂದೇ ಕುಟುಂಬದ ಐವರ ಬರ್ಬರ ಹತ್ಯೆ

ಮಂಡ್ಯ, ಫೆಬ್ರವರಿ 06,2022 (www.justkannada.in): ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಗ್ರಾಮದಲ್ಲಿ ಒಂದೇ ಕುಟುಂಬದವರನ್ನು ಕೊಲೆ ಮಾಡಲಾಗಿದೆ.

ಮಾರಕಾಸ್ತ್ರದಿಂದ ಕೊಚ್ಚಿ ನಾಲ್ವರು ಮಕ್ಕಳು ಮತ್ತು ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ.

26 ವರ್ಷದ ಲಕ್ಷ್ಮಿ, 12 ವರ್ಷದ ರಾಜ್ ಮತ್ತು 7 ವರ್ಷದ ಕೋಮಲ್, 4 ವರ್ಷದ ಕುನಾಲ್, 8 ವರ್ಷದ ಗೋವಿಂದ್ ಅವರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಭೀಕರ ಕೃತ್ಯಕ್ಕೆ ಕೆಆರ್‌ಎಸ್ ಗ್ರಾಮ ಬೆಚ್ಚಿಬಿದ್ದಿದೆ.