ಸಿಎಂ ಭೇಟಿಗೆ ರಾಜಕೀಯ ಬಣ್ಣ ಬೇಡ: ನೆರೆ ವಿಚಾರದಲ್ಲಿ ಕೇಂದ್ರ ಸಹಕರಿಸಿಲ್ಲ- ಮಾಜಿ ಸಚಿವ ರಾಮಲಿಂಗರೆಡ್ಡಿ ಅಸಮಾಧಾನ…

Promotion

ಬೆಂಗಳೂರು,ನ,2,2019(www.justkannada.in):  ಕೇಂದ್ರ ಸರ್ಕಾರ ನೆರೆ ವಿಚಾರದಲ್ಲಿ ಸಹಕರಿಸುತ್ತಿಲ್ಲ ಎಂದು ಮಾಜಿ ಸಚಿವ ರಾಮಲಿಂಗರೆಡ್ಡಿ ಆರೋಪಿಸಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಕಾಂಗ್ರೆಸ್ ಶಾಸಕ ರಾಮಲಿಂಗರೆಡ್ಡಿ, ಕೇಂದ್ರ ಸರ್ಕಾರ ನೆರೆ ಸಂತ್ರಸ್ತರಿಗೆ ಸ್ಪಂದನೆ ನೀಡಿಲ್ಲ. ರಾಜ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಲ್ಲ. ಈ ಮೂಲಕ ಮಲತಾಯಿ ಧೋರಣೆ ತೋರುತ್ತಿದೆ ಎಂದು ಕಿಡಿಕಾರಿದರು.

ಇಂದು ಸಿಎಂ ಬಿಎಸ್ ಯಡಿಯೂರಪ್ಪರನ್ನ ಭೇಟಿ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಚಿವ ರಾಮಲಿಂಗರೆಡ್ಡಿ,  ಕ್ಷೇತ್ರದ ಅಭಿವೃದ್ದಿ ವಿಚಾರಕ್ಕೆ ಸಿಎಂ ಭೇಟಿಯಾಗಿದ್ದೆ. ಹೆಚ್ಚಿನ ಅನುದಾನ ಬಿಡುಗಡೆಗೆ ಮನವಿ ಮಾಡಿದ್ದೇನೆ.  ಅದನ್ನ ಬಿಟ್ಟು ಸಿಎಂ ಬಳಿ ಬೇರೆ ವಿಚಾರ ಚರ್ಚೆ ನಡೆಸಿಲ್ಲ. ಸಿಎಂ ಭೇಟಿಗೆ ರಾಜಕೀಯ ಬಣ್ಣ ಕಟ್ಟುವುದು ಬೇಡ ಎಂದರು.

Key words: flood- Center- did not –cooperate-  Former minister- Ramalingareddy