ಪ್ರವಾಹ ಹಿನ್ನೆಲೆ: ತಮ್ಮ ತಮ್ಮ ಜಿಲ್ಲೆಗಳಲ್ಲಿದ್ದು ಜನರಿಗೆ ನೆರವಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ.

Promotion

ಬೆಂಗಳೂರು,ಜುಲೈ,23,2021(www.justkannada.in): ರಾಜ್ಯಾದ್ಯಂತ ಮಳೆರಾಯ ಅಬ್ಬರಿಸುತ್ತಿದ್ದು ನದಿಪಾತ್ರಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಅಯಾ ಜಿಲ್ಲೆ ಜಿಲ್ಲಾ ಉಸ್ತುವಾರಿ ಸಚಿವರು ಅಲ್ಲೇ ಇದ್ದು ಪ್ರವಾಹದ ಕಡೆ ಗಮನ ಹರಿಸುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.jk

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಜಿಲ್ಲಾ ಉಸ್ತುವಾರಿ ಸಚಿವರುಗಳು ಮತ್ತು ಶಾಸಕರು ತಮ್ಮ ತಮ್ಮ ಜಿಲ್ಲೆ ಹಾಗೂ ಕ್ಷೇತ್ರಗಳಲ್ಲಿ ಉಪಸ್ಥಿತರಿದ್ದು ಜನರಿಗೆ ನೆರವಾಗಬೇಕು,  ರಕ್ಷಣೆ ಮತ್ತು ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರಿಗೆ ಸಿಎಂ ಬಿಎಸ್ ವೈ ತಿಳಿಸಿದ್ದಾರೆ.

ಸಾಧ್ಯವಾದರೆ ಸಂಜೆ ವಿಡಿಯೋ ಕಾನ್ಫರೆನ್ಸ್ ನಡೆಸಲು ಸೂಚನೆ ನೀಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಪ್ರವಾಹದ ಬಗ್ಗೆ ಗಮನ ಹರಿಸುವಂತೆ ಕರೆ ಮಾಡಿ ಸೂಚಿಸಿದ್ದಾರೆ

Key words: Flood -CM –BS yeddyurappa-instructed – minister