ಮೈಸೂರು ಜಿಲ್ಲೆಯಲ್ಲಿ ಪ್ರವಾಹ  ಹಿನ್ನೆಲೆ: ಕೂಡಲೇ ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ….

Promotion

ಮೈಸೂರು,ಆ,7,2020(www.justkannada.in):  ರಾಜ್ಯದಲ್ಲಿ  ಮಳೆಯ ಆರ್ಭಟ ಜೋರಾಗಿದ್ದು ಕೊಡಗು, ಮೈಸೂರು, ಉಡುಪಿ ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ನೆರೆಭೀತಿ ಎದುರಾಗಿದೆ. ಈ ನಡುವೆ ಮೈಸೂರು ಜಿಲ್ಲೆಯಲ್ಲಿ ಪ್ರವಾಹ  ಹಿನ್ನೆಲೆ. ಕೂಡಲೇ ಮುಂಜಾಗ್ರತಾ ಕ್ರಮವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರವಾಹ ಮತ್ತು ಕೊವೀಡ್ ಹಿನ್ನೆಲೆ ಮೈಸೂರು ಜಿಲ್ಲಾ ಪಂಚಾಯತ್ ಕಚೇರಿಯಿಂದ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು. ಈ ವೇಳೆ ಎಲ್ಲಾ ತಾಲ್ಲೂಕು ಟಾಸ್ಕ್ ಫೋರ್ಸ್ ಅಧಿಕಾರಿಗಳ ಜತೆ ಪ್ರಗತಿ ಪರಿಶೀಲಾ ಸಭೆ ನಡೆಸಿದರು. ಈ ವೇಳೆ ಜನ, ಜಾನುವಾರುಗಳ ರಕ್ಷಣಗೆ ತಕ್ಷಣವೇ ಕ್ರಮಕ್ಕೆ ಆದೇಶ ಹೊರಡಿಸಿದರು.jk-logo-justkannada-logo

ಗಂಜಿಕೇಂದ್ರ, ಪರಿಹಾರ ಕೇಂದ್ರಗಳು, ಜಾನುವಾರುಗಳಿಗೆ ಗೋಶಾಲೆ ನಿರ್ಮಾಣಕ್ಕೆ ಸೂಚನೆ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್, ಬೆಳೆ ಹಾನಿ, ಆಸ್ತಿ ಹಾನಿಯಾದರೆ ಸಮೀಕ್ಷೆ ನಡೆಸಿ ನಿಖರವಾದ ವರದಿ ನೀಡುವಂತೆ ಆದೇಶ ಹೊರಡಿಸಿದರು.

ಗಾಳಿ ಮಳೆಗೆ ವಿದ್ಯುತ್ ಕಂಬಗಳು, ವಿದ್ಯುತ್ ಪರಿವರ್ತಕಗಳು ಹಾನಿಯಾಗುತ್ತವೆ.  ತಕ್ಷಣ ಸರಿಪಡಿಸುವಂತೆ ಚೆಸ್ಕಂ ಸಿಬ್ಬಂದಿಗಳು ಸ್ಪಂದಿಸಬೇಕು. ಈವರೆಗೆ ಜಿಲ್ಲೆಯಲ್ಲಿ ಮಳೆಯಿಂದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಶುಂಠಿ ಮುಂತಾದ ಬೆಳೆಗೆ ಹೆಚ್ಚು ನೀರು ನಿಂತರೆ ಬೆಳೆ ನಷ್ಟ ಸಂಭವಿಸುತ್ತದೆ. ಆಗಸ್ಟ್ 1 ರಿಂದ ಈ ವರೆಗೆ ಜಿಲ್ಲೆಯಲ್ಲಿ 66 ಮನೆಗಳಿಗೆ ಹಾನಿಯಾಗಿದೆ‌. ಜಾನುವಾರುಗಳಿಗೆ ಯಾವುದೇ ಹಾನಿ ಆಗಿಲ್ಲ. ಕಬಿನಿ, ಕಾವೇರಿ ಮತ್ತು ಲಕ್ಷ್ಮಣ ತೀರ್ಥ ನದಿಗಳು ಹರಿಯುತ್ತಿದ್ದು ಪ್ರವಾಹ ಎಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ‌.ಇ.ಒ. ಪ್ರಶಾಂತ್ ಕುಮಾರ್ ಮಿಶ್ರಾ, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯಂತ್, ಅಪರ ಜಿಲ್ಲಾಧಿಕಾರಿ ಬಿ‌.ಎಸ್.ಮಂಜುನಾಥಸ್ವಾಮಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Key words: Flood- Mysore –District-secretary -in charge – instructed – action