ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವಾಹ ಪರಿಸ್ಥಿತಿ: ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ- ಹೆಚ್.ಡಿಕೆ ಮನವಿ.

Promotion

ಮೈಸೂರು,ಆಗಸ್ಟ್,29,2022(www.justkannada.in): ರಾಜ್ಯಾದ್ಯಂತ ಇಂದು ಮಳೆರಾಯನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿದ್ದು ಈ ನಡುವೆ ಧಾರಾಕಾರ ಮಳೆಯಿಂದ ಬೆಂಗಳೂರು ಮೈಸೂರು ರಸ್ತೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿ ವಾಹನ ಸಂಚಾರ ಕಷ್ಟಕರವಾಗಿದೆ. ಹೀಗಾಗಿ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ವಿಪರೀತ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವಾಹಸದೃಶ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಜನರು ಇಂದು ಈ ಹೆದ್ದಾರಿಗೆ ಬರದೇ ಇರುವುದು ಒಳಿತು. ಅನಿವಾರ್ಯವಾಗಿ ಸಂಚರಿಸಲೇಬೇಕಾದರೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ ಎಂದು ಮನವಿ ಮಾಡಿದ್ದಾರೆ.

ಬೆಂಗಳೂರು-ಬೆಂಗಳೂರು ಹೆದ್ದಾರಿಯ ವಿವಿಧ ಭಾಗಗಳಲ್ಲಿ ಮಳೆನೀರು ತುಂಬಿದೆ. ಅನೇಕ ಕಡೆ ಹೆದ್ದಾರಿ ಜಲಾವೃತವಾಗಿದೆ. ಅಲ್ಲಲ್ಲಿ ವಾಹನಗಳು ನೀರಿನಲ್ಲಿ ಸಿಲುಕಿವೆ. ಹೀಗಾಗಿ ವಾಹನ ಸಂಚಾರ ಮಾಡುವುದು ಅಪಾಯಕಾರಿ ಎಂದಿದ್ದಾರೆ.

ರಾಮನಗರದಲ್ಲಿ ಭಾರಿ ಮಳೆಯಿಂದ ಜನ ತತ್ತರಿಸಿದ್ದು ಈ ಹಿನ್ನೆಲೆಯಲ್ಲಿ ಫೀಲ್ಡ್ ಗಿಳಿದಿರುವ ಮಾಜಿ ಸಿಎಂ ಹೆಚ್.ಡಿಕೆ ಅವರು ಜನರ ಸಮಸ್ಯೆಗಳನ್ನ ಆಲಿಸುತ್ತಿದ್ದಾರೆ.

Key words: Flood -situation – Bangalore-Mysore- highway-hd Kumaraswamy