ರಾಜ್ಯದಲ್ಲಿ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಹಿನ್ನೆಲೆ-ಸದನದಲ್ಲಿ ಸರ್ಕಾರದ ವಿರುದ್ಧ  ಸಿದ್ಧರಾಮಯ್ಯ ಗುಡುಗು.

ಬೆಂಗಳೂರು,ಸೆಪ್ಟಂಬರ್,13,2022(www.justkannada.in):  ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು ಇಂದು ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಸರ್ಕಾರ ಮುಂಜಾಗ್ರತಾ ಕ್ರಮ ತೆಗದುಕೊಂಡಿಲ್ಲ.  ಭಾರಿ ಮಳೆಯಿಂದ ರಾಜ್ಯದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರು ನಗರದಲ್ಲೂ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.postponement-vaccination-campaign-state-pm-modi-former-cm-siddaramaiah

ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದೇ ಸಮಸ್ಯೆಗೆ ಕಾರಣ.  ಸರ್ಕಾರದ ಬೇಜವಾಬ್ದಾರಿಯಿಂದ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ.  20 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.  ಬಯಲುಸೀಮೆಗಳಲ್ಲಿ ಹೆಚ್ಚು ಮಳೆ ಪ್ರವಾಹವಾಗಿದೆ. ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಸಿದ್ಧರಾಮಯ್ಯ ಗುಡುಗಿದರು.

Key words:  flood- situation – heavy rains –Siddaramaiah- against – government