ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ, ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ

kannada t-shirts

ಮೈಸೂರು,ಸೆಪ್ಟೆಂಬರ್,20,2020(www.justkannada.in) : ಕಬಿನಿ ಜಲಾನಯನ ಪ್ರದೇಶದಲ್ಲಿ ಬಾರಿ ಮಳೆ ಹಿನ್ನೆಲೆ. ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ.

jk-logo-justkannada-logo

ಮೈಸೂರು ಜಿಲ್ಲೆ ಎಚ್. ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಕಬಿನಿ ಜಲಾಶಯವಿದ್ದು, ಜಲಾಶಯದ ಹೊರಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಜಲಾಶಯದಿಂದ ನದಿಗೆ 35ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುತ್ತಿದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಹಾಗೂ ಜನ-ಜಾನುವಾರು ಹಾಗೂ ಆಸ್ತಿಪಾಸ್ತಿ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಜಲಾಶಯದ ಅಧಿಕಾರಿಗಳು ಸೂಚಿಸಿದ್ದಾರೆ.

ಜಲಾಶಯವು ಗರಿಷ್ಠ ನೀರಿನ ಮಟ್ಟ ತಲುಪಿದೆ

ಕಬಿನಿ ಜಲಾಶಯದ ಇಂದಿನ ಒಳಹರಿವು 26000 ಕ್ಯೂಸೆಕ್. ಜಲಾಶಯದ ಇಂದಿನ ಹೊರಹರಿವು ಒಟ್ಟು 35000 ಕ್ಯೂಸೆಕ್ ಆಗಿದೆ. ಜಲಾಶಯವು ಒಟ್ಟು 19.52 ಟಿ. ಎಂ. ಸಿ. ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದ್ದು,  ಜಲಾಶಯದ ಗರಿಷ್ಠ ನೀರಿನ ಮಟ್ಟ 2284ಅಡಿಯನ್ನು ತಲುಪಿದೆ.

key words : Flood-threat-role-river-Kapila-instructed-move-safe-place

website developers in mysore