ಕೊರೋನಾ ವಾರಿಯರ್ಸ್ ಗೆ ಪುಷ್ಪಾಲಂಕಾರದ ಮೂಲಕ ಗೌರವ ಸಮರ್ಪಣೆ…

Promotion

ಬೆಂಗಳೂರು, ಜೂ,11,2020(www.justkannada.in):  ರಾಜ್ಯದಲ್ಲಿ  ಮಹಾಮಾರಿ ಕೊರೋನಾ ವೈರಸ್ ಹರಡದಂತೆ ತಡೆಯಲು ಕೊರೋನಾ ವಾರಿಯರ್ಸ್ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಹೀಗಾಗಿ ಕೊರೊನಾ ವಾರಿಯರ್ಸ್ ಗೆ ಪುಷ್ಪಾಲಂಕಾರದ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು.

ವಿಧಾನಸೌಧದ ಎದುರು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೋಟಗಾರಿಕೆ ಸಚಿವ ನಾರಾಯಣಗೌಡ ಚಾಲನೆ ನೀಡಿ ಕೊರೋನಾ ವಾರಿಯರ್ಸ್ ಗೆ ಗೌರವ ಸಮರ್ಪಣೆ ಮಾಡಿದರು. ತೋಟಗಾರಿಕೆ ಇಲಾಖೆ ಸಹಭಾಗಿತ್ವದಲ್ಲಿ ಪ್ಲವರ್ ಕೌನ್ಸಿಲ್ ಆಫ್ ಇಂಡಿಯಾ ಈ ಕಾರ್ಯಕ್ರಮವನ್ನ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಎಸಿಎಸ್ ವಂದಿತ ಶರ್ಮ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ, ತೋಟಗಾರಿಕೆ ಇಲಾಖೆ ನಿರ್ದೇಶಕ ವೆಂಕಟೇಶ್ ಮತ್ತಿತರರು ಪಾಲ್ಗೊಂಡಿದ್ದರು.flowers-tribute-corona-warriors-bangalore

1 ಲಕ್ಷದ 72 ಸಾವಿರ ಹೂಗಳನ್ನ ಬಳಸಿ ಅಲಂಕಾರ ಮಾಡಲಾಗಿದೆ. ಬೆಂಗಳೂರಿನ ವಿವಿಧೆಡೆ ಇಂದಿನಿಂದ ಮೂರು ದಿನಗಳ ಕಾಲ ಪುಷ್ಪಾಲಂಕರದ ಮೂಲಕ ಕೊರೋನಾ ವಾರಿಯರ್ಸ್ ಗಳಿಗೆ ಗೌರವ ಸಮರ್ಪಣೆ ಮಾಡುವ ಕಾರ್ಯಕ್ರಮ ಆಯೋಜಿಸಲಾಗಿದೆ.

Key words: Flowers -tribute – Corona Warriors-bangalore