ಕೋವಿಡ್ ನಿಯಮ ಪಾಲಿಸಿ, ಇಲ್ಲದಿದ್ದರೇ ಭಾರತ್ ಜೋಡೋ ಯಾತ್ರೆ ಮುಂದೂಡಿ- ಕೇಂದ್ರ ಸರ್ಕಾರ.

Promotion

ನವದೆಹಲಿ,ಡಿಸೆಂಬರ್,21,2022(www.justkannada.in): ಚೀನಾ ಮತ್ತು ಇತರ ದೇಶಗಳಲ್ಲಿ ಕೋವಿಡ್- ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲೂ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ಕೇಂದ್ರ ಆರೋಗ್ಯ ಸಚಿವಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆದು ಕೋವಿಡ್ ನಿಯಮ ಪಾಲಿಸಿ, ಇಲ್ಲದಿದ್ದರೇ ಭಾರತ್ ಜೋಡೋ ಯಾತ್ರೆ ಮುಂದೂಡಿ ಎಂದು ಮನವಿ ಮಾಡಿದೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಹುಲ್ ಗಾಂಧಿಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಪತ್ರ ಬರೆದಿದ್ದು, ಮಾಸ್ಕ್ ಮತ್ತು ಸ್ಯಾನಿಟೈಸರ್ ಅನ್ನು ಬಳಸಲು ಮತ್ತು ಲಸಿಕೆ ಹಾಕಿದ ಜನರು ಮಾತ್ರ ಪಾದಯಾತ್ರೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ಆಗ್ರಹಿಸಿದ್ದಾರೆ.

ಕೋವಿಡ್ ಮಾರ್ಗಸೂಚೆ ಅನುಸರಿಸದಿದ್ದರೇ  ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತ್ ಜೋಡೋ ಯಾತ್ರೆಯನ್ನು ಮುಂದೂಡಬೇಕು ಎಂದು ಕೇಂದ್ರ ಆರೋಗ್ಯ ಸಚಿವರು  ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆ ಇದುವರೆಗೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಸಂಚರಿಸಿದ್ದು ಸದ್ಯ ಈಗ ರಾಜಸ್ಥಾನದಲ್ಲಿ ಸಾಗುತ್ತಿದೆ.

Key words: follow – Covid rule- postpone -Bharat Jodo Yatra-Central Govt.