ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಕೋರಿದ ಆಹಾರ ಸಚಿವ ಉಮೇಶ್ ಕತ್ತಿ…

ಬೆಂಗಳೂರು,ಏಪ್ರಿಲ್,28,2021(www.justkannada.in):  ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸಾಯೋದು ಒಳ್ಳೆಯದು ಎಂದು ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಆಹಾರ ಸಚಿವ ಉಮೇಶ್ ಕತ್ತಿ ಇದೀಗ ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಕೋರಿದ್ದಾರೆ.jk

ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದರು. ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಸಚಿವರ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು.Food Minister -Umesh katti- apologized - statement.

ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ತಮ್ಮ ಹೇಳಿಕೆ ಬಗ್ಗೆ ಆಹಾರ ಸಚಿವ ಉಮೇಶ್ ಕತ್ತಿ ಕ್ಷಮೆ ಕೋರಿದ್ದಾರೆ. ಈ ಎಲ್ಲಾ ಘಟನೆ ನಂತರ, ಸಚಿವ ಉಮೇಶ್ ಕತ್ತಿ ರಾಜ್ಯದ ಜನರ ಕ್ಷಮೆಯನ್ನು ಕೇಳಿದ್ದಾರೆ. ಸಾಯಿ ಎಂದು ಹೇಳಿದ್ದು ತಪ್ಪು ಇದಕ್ಕೆ ಕ್ಷಮೆ ಕೇಳುತ್ತೇನೆ. ಆ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಬೇಕಿತ್ತು. ಉತ್ತರಿಸಿದೆ. ನನ್ನ ಬಾಯಲ್ಲಿ ಸಾಯಿ ಎಂಬ ಪದ ಬರಬಾರದಿತ್ತು ಎಂದು ಹೇಳಿ ಕ್ಷಮೆ ಕೋರಿದ್ದಾರೆ.

Key words: Food Minister -Umesh katti- apologized – statement.