ವಿದ್ಯುತ್ ತಂತಿ ತಗುಲಿ ಅಸ್ವಸ್ಥಗೊಂಡಿದ್ದ ಕಾಡಾನೆ ಗುಣಮುಖ: ಬಂಡೀಪುರ ಅರಣ್ಯಾಧಿಕಾರಿಗಳ ಕಾರ್ಯಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಚಾಮರಾಜನಗರ,ಫೆಬ್ರವರಿ,18,2023(www.justkannada.in):  ಬೆಳೆ ರಕ್ಷಿಸಲು ಅಕ್ರಮವಾಗಿ ನಿರ್ಮಿಸಿದ್ದ ವಿದ್ಯುತ್ ತಂತಿ ತಗುಲಿ ಅಸ್ವಸ್ಥಗೊಂಡಿದ್ದ ಕಾಡಾನೆ ಗುಣಮುಖವಾದ ಹಿನ್ನೆಲೆ ಇದಕ್ಕೆ ಶ್ರಮಿಸಿದ ಬಂಡೀಪುರ ಅರಣ್ಯಾಧಿಕಾರಿಗಳು ಮತ್ತು ವೈದ್ಯರ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಬರಗಿ ಗ್ರಾಮದಲ್ಲಿ ಬೆಳೆ ರಕ್ಷಣೆಗಾಗಿ ಜಮೀನಿಗೆ ಅಳವಡಿಸಲಾಗಿದ್ದ ಅಕ್ರಮ ವಿದ್ಯುತ್‌ ತಂತಿ ಬೇಲಿಯನ್ನು ಸ್ಪ‍ರ್ಶಿಸಿ ಕಾಡಾನೆ ತೀವ್ರವಾಗಿ ಅಸ್ವಸ್ಥಗೊಂಡಿತ್ತು. ಕಾಡಾನೆಯನ್ನು ಅರಣ್ಯ ಅಧಿಕಾರಿಗಳು ಹಾಗೂ ಪಶುವೈದ್ಯರು ಯಶಸ್ವಿಯಾಗಿ ರಕ್ಷಿಸಿ ನಿರಂತರ ಚಿಕಿತ್ಸೆ ನೀಡಿದ್ದಾರೆ.

ಇದೀಗ ಕಾಡಾನೆ ಗುಣಮುಖವಾಗಿದ್ದು, ಸದ್ಯ ಅಧಿಕಾರಿಗಳು ಮತ್ತೆ ಕಾಡಾನೆಯನ್ನ ಕಾಡಿಗೆ ವಾಪಸ್‌ ಕಳಿಸಿದ್ದಾರೆ. ಇನ್ನು ಬಂಡೀಪುರ ಅರಣ್ಯಾಧಿಕಾರಿಗಳ ಕಾರ್ಯಕ್ಕೆ ಪ್ರಧಾನಿ‌ ಮೋದಿ ಮೆಚ್ಚುಗೆ ಸೂಚಿಸಿದ್ದು ಅರಣ್ಯ ಸಚಿವರ ಟ್ವೀಟ್​ನ್ನು ರೀ ಟ್ವೀಟ್ ಮಾಡಿದ್ದಾರೆ.

Key words: Forest- elephant-protect-PM Modi- praises -Bandipur -forest officers