ಕಾಡ್ಗಿಚ್ಚಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸಾವು.

Promotion

ಹಾಸನ,ಫೆಬ್ರವರಿ,18,2023(www.justkannada.in): ಕಾಡ್ಗಿಚ್ಚಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸಾವನ್ನಪ್ಪಿರುವ ಘಟನೆ ನಡೆದಿದೆ.

ಫಾರೆಸ್ಟ್ ಗಾರ್ಡ್ ಸುಂದರೇಶ್  ಮೃತಪಟ್ಟವರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ಚಿಕಿತ್ಸೆ ಫಲಿಸದೆ ಫಾರೆಸ್ಟ್ ಗಾರ್ಡ್ ಸುಂದರೇಶ್  ಮೃತಪಟ್ಟಿದ್ದಾರೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದಲ್ಲಿ ಫೆಬ್ರವರಿ 16ರಂದು ಮಧ್ಯಾಹ್ನ ಕಾಡುಮನೆ ಎಸ್ಟೇಟ್ ಬಳಿ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು.  ಬೆಂಕಿ ನಂದಿಸಲು ಡಿಆರ್​ಎಫ್​ಒ ನೇತೃತ್ವದಲ್ಲಿ 6 ಮಂದಿ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದರು. ಘಟನೆಯಲ್ಲಿ ಅರಣ್ಯ ಅಧಿಕಾರಿ, ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು. ಬೆಂಕಿಗೆ ಸಿಲುಕಿ ಡಿಆರ್​ಎಫ್ ಓ ಮಂಜುನಾಥ್, ಫಾರೆಸ್ಟ್ ಗಾರ್ಡ್ ಸುಂದರೇಶ್ ವಾಚರ್ ಗಳಾದ ತುಂಗೇಶ್ ಮತ್ತು ಮಹೇಶ್​ಗೆ ಗಾಯಗಳಾಗಿದ್ದವು.

ಹಾಸನದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ  ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿತ್ತು. ಇದೀಗ ರಾತ್ರಿ ಸುಂದರೇಶ್ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: forest guard –died- seriously- injured – forest -fire