ಬಹಿರ್ದೆಸೆಗೆ ತೆರಳಿದ್ದ ಹಾಡಿ ವಾಸಿ ಮೇಲೆ ಗುಂಡು ಹಾರಿಸಿದ ಅರಣ್ಯ ಸಿಬ್ಬಂದಿ.

Promotion

ಮೈಸೂರು,ಡಿಸೆಂಬರ್,2,2021(www.justkannada.in):  ಹಾಡಿ ವಾಸಿ ಮೇಲೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ ಘಟನೆ ನಡೆದಿದ್ದು ಈ ಸಂಬಂಧ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಕೊಲೆಯತ್ನ ಆರೋಪದ ಮೇಲೆ ದೂರು ನೀಡಲಾಗಿದೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ರಾಣಿ ಗೇಟು ಜೇನು ಕುರುಬರ ಹಾಡಿ ಸಮೀಪ ಈ ಘಟನೆ ನಡೆದಿದೆ. ಹಾಡಿ ವಾಸಿ ಬಸವ ಗುಂಡೇಟಿನಿಂದ ಗಾಯಗೊಂಡಿರುವ ವ್ಯಕ್ತಿ. ಹಾಡಿ ವಾಸಿ ಬಸವ ಜಮೀನಿನಲ್ಲಿ ಜೋಳ ಕಟಾವು ಮಾಡಿ, ಪಕ್ಕದ ಜಮೀನಿಗೆ ಬಹಿರ್ದೆಸೆಗೆ ಹೋಗಿದ್ದಾಗ ಸಿಬ್ಬಂದಿ ಗುಂಡು ಹಾರಿಸಿದ್ದಾರೆ.

ಅರಣ್ಯ ಇಲಾಖೆ ವಾಚ್ ಮನ್ ಸುಬ್ರಮಣಿ ಸೇರಿ ಮೂವರು  ತನ್ನ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾರೆಂದು ಗಾಯಾಳು ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಗಾಯಾಳುಗೆ ಚಿಕಿತ್ಸೆ ನೀಡಲಾಗುತ್ತಿದೆ.

Key words: forest guard- shot – Hadi Vasi-mysore