Tuesday, September 15, 2026

BDA Apartments

ಪಿಲಿಕುಳ ನಿಸರ್ಗ ಧಾಮಕ್ಕೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಭೇಟಿ, ಪರಿಶೀಲನೆ BD...
Home Front Page ಪಿಲಿಕುಳ ನಿಸರ್ಗ ಧಾಮಕ್ಕೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಭೇಟಿ, ಪರಿಶೀಲನೆ.

ಪಿಲಿಕುಳ ನಿಸರ್ಗ ಧಾಮಕ್ಕೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಭೇಟಿ, ಪರಿಶೀಲನೆ.

ಮಂಗಳೂರು,ಜುಲೈ,9,2021(www.justkannada.in): ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ ಇಂದು ನಗರದ ಪಿಲಿಕುಳ ನಿಸರ್ಗ ಧಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.jk

ಈ ಸಂದರ್ಭದಲ್ಲಿ ಪಿಲಿಕುಳ ನಿಸರ್ಗ ಧಾಮದ ಜೈವಿಕ ಉದ್ಯಾನವನದ ಆವರಣದಲ್ಲಿ ಸಸಿಯೊಂದನ್ನು ನೆಟ್ಟಿದ ಸಚಿವ ಅರವಿಂದ ಲಿಂಬಾವಳಿ  ನಂತರ ಮೃಗಾಲಯವನ್ನು ವೀಕ್ಷಿಸಿದರು. ಬಳಿಕ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಈ ಸಂದರ್ಭದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್ ವೆಂಕಟೇಶ್ ಜಿ.ಎಸ್, ನಿರ್ದೇಶಕ ಜಯಪ್ರಕಾಶ್ ಭಂಡಾರಿ, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಕೆ.ವಿ ರಾವ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಲ್ಕಾರಿ , ಬಿ.ಸಿ.ಎಫ್ ಕರಿಕಳನ್, ಎ.ಸಿ.ಎಫ್ ಸುಬ್ರಹ್ಮಣ್ಯ, ರೇಂಜ್ ಆಫೀಸರ್ ಶ್ರೀಧರ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Key words: Forest Minister- Arvind Limbavali -visits – inspects- Pilikula’s -nature -sanctuary.