ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್ ಗೆ ಎದೆನೋವು; ಆಸ್ಪತ್ರೆಗೆ ದಾಖಲು.

ಪರ್ಥ್,ಡಿಸೆಂಬರ್,2,2022(www.justkannada.in):  ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬ್ಯಾಟ್ಸ್‌ ಮನ್ ರಿಕಿ ಪಾಂಟಿಂಗ್ ಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪರ್ತ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದ ವೇಳೆ ರಿಕಿ ಪಾಂಟಿಂಗ್ ಕಾಮೆಂಟರಿ ಮಾಡುತ್ತಿದ್ದರು. ಈ ವೇಳೆ ರಿಕಿ ಪಾಂಟಿಂಗ್​​ ಗೆ ಎದೆನೋವು  ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕಿ ಪಾಂಟಿಂಗ್​ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ತಿಳಿದುಬಂದಿದೆ.

ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಪರ್ತ್ ಟೆಸ್ಟ್‌ನಲ್ಲಿ ರಿಕಿ ಪಾಂಟಿಂಗ್ ಚಾನೆಲ್ 7 ಪರ ಕಾಮೆಂಟರಿ ಪ್ಯಾನೆಲ್‌ನ ಭಾಗವಾಗಿದ್ದರು. ಈ ವೇಳೆ ಪಂದ್ಯದ ಊಟದ ವಿರಾಮದ ವೇಳೆ ಪಾಂಟಿಂಗ್​ಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಕಾಮೆಂಟರಿ ಕೊಠಡಿಯಿಂದ ಹೊರಬಂದ ಪಾಂಟಿಂಗ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಹೇಳಲಾಗುತ್ತಿದೆ.

Key words: Former –Australia- cricketer -Ricky Ponting – admitted -hospital.