ಇಂದು ಕಾಂಗ್ರೆಸ್ ಸೇರಲಿದ್ದಾರೆ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್.

Promotion

ಬೆಂಗಳೂರು, ಅಕ್ಟೋಬರ್, 20,2023(www.justkannada.in): ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಇಂದು  ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪೂರ್ಣಿಮಾ ಶ್ರೀನಿವಾಸ್ ಅವರು  ಅಧಿಕೃತವಾಗಿ ಬಿಜೆಪಿಗೆ ಗುಡ್​ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಕಳೆದ ತಿಂಗಳಷ್ಟೇ ಕೆ.ಆರ್. ಪುರದಲ್ಲಿರುವ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿದ್ದರು. ಈ ವೇಳೆ ಪಕ್ಷ ಸೇರುವುದಾಗಿ ಡಿಕೆಶಿಗೆ ಪೂರ್ಣಿಮಾ ಭರವಸೆ ಕೊಟ್ಟಿದ್ದರು.  ಅದರಂತೆ ಇದೀಗ ಕಾಂಗ್ರೆಸ್‌ ಸೇರುತ್ತಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದ ಕೆ ಪೂರ್ಣಿಮಾ ಶ್ರೀನಿವಾಸ್  2023ರ ಚುನಾವಣೆಯಲ್ಲಿ ಸೋಲು ಕಂಡರು. ಸೋತ ಮೂರ್ನಾಲ್ಕು ತಿಂಗಳಲ್ಲೇ ಇದೀಗ ಕಾಂಗ್ರೆಸ್​ನತ್ತ ಮುಖಮಾಡಿದ್ದಾರೆ.

Key words: Former BJP-MLA -Purnima Srinivas –will- join- Congress -today