ಕ್ರಿಕೆಟ್2: ಟೀಂ ಇಂಡಿಯಾದಲ್ಲಿ ‘ಕೂಲ್ ಕ್ಯಾಪ್ಟನ್’ ಹೊಸ ಇನ್ನಿಂಗ್ಸ್ ! ಏನಿದರ ಗುಟ್ಟು…?

ಬೆಂಗಳೂರು, ಸೆಪ್ಟೆಂಬರ್ 09, 2021 (www.justkannada.in): ಟಿ20 ವಿಶ್ವಕಪ್ ಟೂರ್ನಿಗೆ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಆಟಗಾರರನ್ನು ಆಯ್ಕೆ ಮಾಡಲಾಗಿದೆ.

ವಿಶೇಷ ಹಾಗೂ ಆಶ್ಚರ್ಯದ ತೀರ್ಮಾನ ಎಂದರೆ ಮಾಜಿ ನಾಯಕ, ಕೂಲ್ ಕ್ಯಾಪ್ಟನ್ ಎಂ.ಎಸ್. ಧೋನಿ ಅವರನ್ನು ತಂಡದ ಮೆಂಟರ್ ಆಗಿ ನೇಮಿಸಲಾಗಿದೆ.

ಸ್ಟಾರ್ ಸ್ಪಿನ್ನರ್‌ಗಳಾದ ವರುಣ್ ಚಕ್ರವರ್ತಿ, ರಾಹುಲ್ ಚಹರ್, ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಅವರನ್ನು ಆಯ್ಕೆ ಮಾಡಲಾಗಿದೆ. ಪೃಥ್ವಿ ಶಾ, ಶಿಖರ್ ಧವನ್, ಟಿ. ನಟರಾಜನ್ ಮತ್ತು ಯುಜ್ವೇಂದ್ರ ಚಾಹಲ್ ಕೈಬಿಡಲಾಗಿದೆ.

ಅಕ್ಟೋಬರ್ 17 ರಿಂದ ಒಮಾನ್ ಮತ್ತು ಯುಎಇನಲ್ಲಿ ವಿಶ್ವಕಪ್ ಟೂರ್ನಿ ನಡೆಯಲಿದೆ. ಅ. 24 ರಂದು ಭಾರತ, ಪಾಕಿಸ್ತಾನ ತಂಡಗಳ ನಡುವೆ ಪಂದ್ಯ ನಡೆಯಲಿದೆ.

ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪ ನಾಯಕ), ಕೆ.ಎಲ್. ರಾಹುಲ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ಆರ್. ಅಶ್ವಿನ್, ಅಕ್ಷರ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅವರನ್ನು ಆಯ್ಕೆ ಮಾಡಲಾಗಿದ್ದು, ಶ್ರೇಯಸ್ ಅಯ್ಯರ್, ಶಾರ್ದುಲ್ ಠಾಕೂರ್, ದೀಪಕ್ ಚಹರ್ ಮೀಸಲು ಆಟಗಾರರಾಗಿದ್ದಾರೆ.

key words: Former captain M.S. Dhoni appointed as Mentor for team india