ನಿಷ್ಪಕ್ಷಪಾತವಾಗಿ ಸದನವನ್ನ ನಡೆಸಿ- ನೂತನ ಸ್ಪೀಕರ್ ಯುಟಿ ಖಾದರ್ ಗೆ ಮಾಜಿ ಸಿಎಂ ಬೊಮ್ಮಾಯಿ ಅಭಿನಂದನೆ.

Promotion

ಬೆಂಗಳೂರು,ಮೇ,24,2023(www.justkannada.in): ನಿಷ್ಪಕ್ಷಪಾತವಾಗಿ ತಾವು ಸದನವನ್ನು ನಡೆಸಬೇಕು. ವಿಪಕ್ಷ ಸದಸ್ಯರ ಹೇಳಿಕೆಗೆ ಸ್ಪೀಕರ್​ ಹೆಚ್ಚು ಅವಕಾಶ ಕೊಡಬೇಕು. ಚರ್ಚೆ ವೇಳೆ ಕೊನೆಯ ಸಾಲಿನವರಿಗೆ ಹೆಚ್ಚು ಅವಕಾಶ ಕೊಡಬೇಕು ಎಂದು ನೂತನ ಸ್ಪೀಕರ್ ಯು.ಟಿ ಖಾದರ್ ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

ನೂತನ ಸ್ಪೀಕರ್​ ಯು.ಟಿ ಖಾದರ್ ​ಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕರ್ನಾಟಕದ ವಿಧಾನಮಂಡಲಕ್ಕೆ ತನ್ನದೇ ಆದ ಇತಿಹಾಸವಿದೆ. ಇಡೀ ದೇಶಕ್ಕೆ ಮಾರ್ಗದರ್ಶನ ನೀಡಿದ ವಿಧಾನಮಂಡಲವಿದು. ಯು.ಟಿ.ಖಾದರ್​ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದಾರೆ. ಯು.ಟಿ.ಖಾದರ್ ವಿಪಕ್ಷ ಉಪನಾಯಕರಾಗಿಯೂ ಉತ್ತಮ ಕೆಲಸ ಮಾಡಿದ್ದಾರೆ.

ಈ ಹಿಂದೆ ಸ್ಪೀಕರ್​ ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ನ್ಯಾಯಾಂಗಕ್ಕಿಂತ ಎತ್ತರವಾದದ್ದು ಸ್ಪೀಕರ್​ ಸ್ಥಾನ.  ಸ್ಪೀಕರ್ ಹೊಸ ವಿಚಾರಕ್ಕೆ ಅವಕಾಶ ಮಾಡಿಕೊಡುವ ವಿಶ್ವಾಸವಿದೆ. ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ಶಕ್ತಿ ನಿಮ್ಮಲ್ಲಿದೆ ಎಂದರು.

Key words: Former CM- Bommai- congratulates – new Speaker- UT Khader.