Sunday, September 13, 2026

BDA Apartments

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು BDA JK_Adv BDA Adv
Home Crime  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು.

 ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು.

ಬೆಂಗಳೂರು ,ಜನವರಿ,28,2022(www.justkannada.in): ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆವರ ಮೊಮ್ಮಗಳು ಸೌಂದರ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿಯವರ ಮಗಳು ಸೌಂದರ್ಯ(30)  ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಸಂತನಗರದ ಮನೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು dsdf

ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಪತಿ ಡಾ.ನೀರಜ್ ಕೆಲಸಕ್ಕೆ ಹೋದ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ.  ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಗಾದೇ ಅವರು ಸಾವನ್ನಪ್ಪಿದ್ದಾರೆ. ಬಿಎಸ್ವೈ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧಾವಿಸಿದ್ದಾರೆ.

Key words: former CM -BS Yeddyurappa- Granddaughter – suicide.