ಮೈಸೂರು ಪಾಲಿಕೆಯಲ್ಲಿ ಮೈತ್ರಿ ವಿಚಾರದ ಗುಟ್ಟು ಬಿಟ್ಟುಕೊಡದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ…

Promotion

ಮೈಸೂರು,ಫೆಬ್ರವರಿ,3,2021(www.justkannada.in):  ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಹೊಂದಾಣಿಕೆ ವಿಚಾರದ ಗುಟ್ಟು  ಬಿಟ್ಟುಕೊಡದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಗಾಳಿಯಲ್ಲಿ ಗುಂಡು ಹಾರಿಸಿದ ರೀತಿ ಹೇಳಿಕೆ ನೀಡಿದ್ದಾರೆ.jk

ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಮಾಜಿಸಿಎಂ ಹೆಚ್.ಡಿ ಕುಮಾರಸ್ವಾಮಿ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅನಿವಾರ್ಯ ಇರುವ ಕಡೆಗಳಲ್ಲಿ ಅಲ್ಲಿನ ಮುಖಂಡರೇ ತೀರ್ಮಾನ ಮಾಡಿಕೊಳ್ಳುತ್ತಾರೆ. ರಾಜ್ಯದ ಕೆಲವು ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ -ಬಿಜೆಪಿ, ಬಿಜೆಪಿ-ಜೆಡಿಎಸ್, ಕಾಂಗ್ರೆಸ್-ಜೆಡಿಎಸ್ ಸೇರಿ ಆಡಳಿತ ನಡೆಸುತ್ತಿವೆ. ಆಡಳಿತದ ದೃಷ್ಟಿಯಿಂದ ಅನಿವಾರ್ಯವಾಗಿ ಜೊತೆಗೂಡಿ ಆಡಳಿತ ನಡೆಸಬೇಕಾಗುತ್ತೆ ಎಂದರು. Former CM -H D Kumaraswamy- Mysore-city corporation-alliance-jds-bjp

ಈ ಮೂಲಕ ಮೈಸೂರು ಪಾಲಿಕೆ ಮೇಯರ್ ಚುನಾವಣೆ ಬಿಜೆಪಿ ಜೊತೆಗಿನ ಹೊಂದಾಣಿಕೆ ವಿಚಾರದ ಗುಟ್ಟು  ಬಿಟ್ಟುಕೊಡಲು ಹೆಚ್ ಡಿ ಕುಮಾರಸ್ವಾಮಿ ನಿರಾಕರಿಸಿದರು.

Key words: Former CM -H D Kumaraswamy- Mysore-city corporation-alliance-jds-bjp