ಮಾಜಿ ಸಿಎಂ ಹೆಚ್.ಡಿಕೆಗೆ ಟಾಂಗ್: ಸಿದ್ಧರಾಮಯ್ಯ ಪರ ಬ್ಯಾಟ್ ಬೀಸಿದ ಅನರ್ಹ ಶಾಸಕ ನಾರಾಯಣಗೌಡ…

Promotion

ಕೆ.ಆರ್ ಪೇಟೆ,ನ,11,2019(www.justkannada.in):  ಬಿಜೆಪಿ ಅಪರೇಷನ್ ಕಮಲ ಕುರಿತು ಗುಟ್ಟು ಬಿಟ್ಟುಕೊಟ್ಟಿದ್ದ ಕೆ.ಆರ್ ಪೇಟೆ ಕ್ಷೇತ್ರದ ಅನರ್ಹ ಶಾಸಕ ನಾರಾಯಣಗೌಡ ಇದೀಗ ಮಾಜಿ ಸಿಎಂ ಸಿದ್ಧರಾಮಯ್ಯ ಪರ ಬ್ಯಾಟ್ ಬೀಸಿ ಹೆಚ್.ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.

ಹೆಚ್.ಡಿ ಕುಮಾರಸ್ವಾಮಿ ಅವಧಿಗಿಂತ ಸಿದ್ಧರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಕ್ಷೇತ್ರದಲ್ಲಿ ಹೆಚ್ಚು ಕೆಲಸ ಆಗಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ  ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿದ್ದರು ಎಂದು ಅನರ್ಹ ಶಾಸಕ ನಾರಾಯಣಗೌಡ ತಿಳಿಸಿದ್ದಾರೆ.

ಕೆ.ಆರ್ ಪೇಟೆ ತಾಲ್ಲೂಕು ಕಿಕ್ಕೇರಿಯಲ್ಲಿ ಇಂದು ಮಾತನಾಡಿದ ಅನರ್ಹ ಶಾಸಕ ನಾರಾಯಣಗೌಡ, ಸಿದ್ಧರಾಮಯ್ಯ ಸಿಎಂ ಆಗಿದ್ದ ವೇಳೆ ಕ್ಷೇತ್ರಕ್ಕೆ ನಾಲ್ಕು ಮೊರಾರ್ಜಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ಶಾಲೆ,  ನವೋದಯ ಶಾಲೆ ಮಂಜೂರು ಮಾಡಿದ್ದರು.  ಆದ್ರೆ ನಮ್ಮ ಪಕ್ಷದವರೇ ಆದ ಹೆಚ್.ಡಿ ಕುಮಾರಸ್ವಾಮಿ ಆ ಶಾಲೆಗಳಿಗೆ  ಕೇವಲ ಕಾಂಪೌಂಡ್  ಹಾಕಿಸಲು ಸಹಾಯ ಮಾಡಲಿಲ್ಲ ಎಂದು ಕಿಡಿಕಾರಿದರು.

Key words: former CM- HD kumaraswamy-disqualified MLA-  Narayana Gowda – Siddaramaiah