ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಬೆಂಗಳೂರು, ಅಕ್ಟೋಬರ್,27,2022(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಜೆಡಿಎಸ್ ನಾಯಕರು ತಯಾರಾಗುತ್ತಿದ್ದು ಈ ನಡುವೆ ಇಂದು ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಚಾಲನೆ ನೀಡಿದರು.

ಗುಟ್ಟಳ್ಳಿ ಗವಿಗಂಗಾಧರೇಶ್ವರ ದೇಗುಲದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದರು, ಪಂಚರತ್ನ ರಥಕ್ಕೆ ಪೂಜೆ ಮಾಡಿ ಸಾಂಕೇತಿಕ ಚಾಲನೆ ನೀಡಿದರು. ಶಿಕ್ಷಣ, ಉದ್ಯೋಗ, ಕೃಷಿ, ನೀರಾವರಿ, ಆರೋಗ್ಯ ಯೋಜನೆಗಳ ಪಂಚರತ್ನವಾಗಿದೆ. 2023ರ ವಿಧಾನಸಭಾ ಚುನಾವಣೆ ಹಿನ್ನೆಲೆ ಜೆಡಿಎಸ್ ಮೆಗಾ ಪ್ಲಾನ್ ನಡೆಸಿದೆ.hd-deve-gowda-decision-contest-rajya-sabha-former-cm-hd-kumaraswamy

ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,  1994 ರಲ್ಲಿ ಚುನಾವಣೆಗೆ ಮೊದಲು ಇಲ್ಲೇ ಪೂಜೆ ಸಲ್ಲಿಸಲಾಗಿತ್ತು, ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ಚುನಾವಣೆಗೆ ಹೋಗಿದ್ದವು. ನವೆಂಬರ್ 1 ರಿಂದ  ಪಂಚರತ್ನ ರಥಯಾತ್ರೆ ಆರಂಭಿಸಲು ಚಿಂತಿಸಿದ್ಧೆ. ಆದರೆ ಇಂದು ಒಳ್ಳೆ ದಿನವಾದ್ದರಿಂದ ಇಂದೇ ಚಾಲನೆ ನೀಡಿದ್ದೇವೆ ಎಂದರು.

ನಾಳೆ ಅಣ್ಣಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುವುದು. ನವೆಂಬರ್ 1 ರಂದು ಕೋಲಾರದಲ್ಲಿ ಸಮಾವೇಶ ಆಯೋಜಿಸಿದ್ದೇವೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

Key words: Former CM -HD Kumaraswamy – JDS- Pancharatna Rath Yatra