‘ಕೊಟ್ಟ ಕುದುರೆಯನ್ನು ಏರಲಾಗದವನು ಧೀರನೂ ಅಲ್ಲ, ಶೂರನೂ ಅಲ್ಲ : ಬಿಜೆಪಿ ನಾಯಕರ ಹೇಳಿಕೆಗಳಿಗೆ ಮಾಜಿ ಸಿಎಂ ಹೆಚ್.ಡಿಕೆ ಆಕ್ರೋಶ…

kannada t-shirts

 

ಬೆಂಗಳೂರು,ಮೇ,,14,2021(www.justkannada.in):  ಇತ್ತೀಚೆಗೆ ಬಿಜೆಪಿ ನಾಯಕರು ನೀಡಿರುವ ಹೇಳಿಕೆಗಳಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.jk

ಟ್ವೀಟ್ಟರ್ ನಲ್ಲಿ ಟ್ವೀಟ್ ಮಾಡಿ ಬಿಜಪಿ ನಾಯಕರ ಹೇಳಿಕೆಗಳನ್ನ ಉಲ್ಲೀಖಿಸಿದ ಹೆಚ್.ಡಿ ಕುಮಾರಸ್ವಾಮಿ, ನಾವೇನ್‌ ನೋಟ್‌ ಪ್ರಿಂಟ್‌ ಮಾಡ್ತೀವಾ?, ಜಡ್ಜ್‌ಗಳು ಸರ್ವಜ್ಞರಲ್ಲ. ಕೊರೊನಾ ವೈರಸ್‌ಗಾಗಿ ಚೀನಾವನ್ನು ದೂಷಿಸಬೇಕು. ನೇಣು ಹಾಕಿಕೊಳ್ಳಲು ಆಗುತ್ತಾ? ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ. ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ. ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು.

‘ಅವರು ಅಷ್ಟು ವರ್ಷ ಅಧಿಕಾರ ಮಾಡಿದರು, ಇವರು ಅಷ್ಟು ವರ್ಷ ತಿಂದರು,’ ಎಂದು ದೂಷಿಸಿಕೊಂಡೇ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹೊಣೆಗೇಡಿತನ ಪ್ರದರ್ಶಿಸುತ್ತಿದೆ. ಪ್ರತಿಯೊಂದಕ್ಕೂ ವಿರೋಧ ಪಕ್ಷಗಳನ್ನು ದೂಷಿಸುವ ಬಿಜೆಪಿಗೆ ಅಧಿಕಾರವೇಕೆ? ‘ಕೊಟ್ಟ ಕುದುರೆಯನ್ನು ಏರಲಾಗದವನು ಧೀರನೂ ಅಲ್ಲ, ಶೂರನೂ ಅಲ್ಲ,’ ಎಂಬ ಮಾತು ಬಿಜೆಪಿಗೆ ಹೊಂದುವಂಥದ್ದು ಎಂದು ಟೀಕಿಸಿದರು.

ಕೋವಿಡ್‌ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳೆರಡೂ ವಿಫಲ

ಕೋವಿಡ್‌ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳೆರಡೂ ವಿಫಲವಾಗಿವೆ. ಅತಿ ಹೆಚ್ಚು ಕೋವಿಡ್‌ ಪ್ರಕರಣಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮುಂದಿದೆ. ಕೇಂದ್ರ ಕೋವಿಡ್‌ ಅನ್ನು ಅಸಮರ್ಪಕವಾಗಿ ನಿರ್ವಹಿಸಿದ್ದೇ ಇದಕ್ಕೆ ಕಾರಣ. ಅತಿ ಹೆಚ್ಚು ಸೋಂಕು ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮುಂದಿದೆ. ಇದು ರಾಜ್ಯ ಸರ್ಕಾರದ ಅಸಮರ್ಥತೆ ಎಂದು ಹೆಚ್.ಡಿಕೆ ಕಿಡಿಕಾರಿದರು.

ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು ಎಂದು ಹೆಚ್.ಡಿಕೆ ಗುಡುಗಿದರು.

ಪರಸ್ಪರ ಗೂಬೆ ಕೂರಿಸುವುದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಖಯಾಲಿ. ಇದನ್ನು ಅರಿತೇ ಜನ ಪ್ರಾದೇಶಿಕ ಪಕ್ಷಗಳಿಗೆ ಮಣೆ ಹಾಕುತ್ತಿದ್ದಾರೆ. ಕೋವಿಡ್‌ ನಿಭಾಯಿಸುವಲ್ಲಿ ಪ್ರಾದೇಶಿಕ ಪಕ್ಷಗಳ ಸರ್ಕಾರವಿರುವ ರಾಜ್ಯಗಳು ಯಶಸ್ವಿಯಾಗಿವೆ. ಜನರಿಗೆ ಸವಲತ್ತು ನೀಡುತ್ತಿವೆ. ಆದರೆ, ರಾಷ್ಟ್ರೀಯ ಪಕ್ಷಗಳ ಸರ್ಕಾರಗಳಿರುವೆಡೆ ಅಂಥ ಬದ್ಧತೆ ಕಾಣುತ್ತಿಲ್ಲ.

ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದೆ. ಕೋವಿಡ್‌ ಪರಿಸ್ಥಿತಿ ನಿಭಾಯಿಸುವ ವೇಳೆ ಜನರಿಗೆ ಆದ ತೊಂದರೆಗೆ ಈ ರಾಜ್ಯಗಳಲ್ಲಿ ಪರಿಹಾರಗಳನ್ನೂ ನೀಡಲಾಗಿದೆ. ಜನರಿಗೆ ಉಚಿತ ಆಹಾರ, ಆರೋಗ್ಯ ಸೇವೆ ನೀಡಲಾಗಿದೆ. ಜನರೆಡೆಗೆ ಪ್ರಾದೇಶಿಕ ಪಕ್ಷಗಳಿಗೆ ಇರುವ ಬದ್ಧತೆಗೆ ಇದು ಸಾಕ್ಷಿ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಗೆ ಟಾಂಗ್ ನೀಡಿದರು. Former CM –HD kumaraswamy- outrage - BJP leaders- statment

ಬಿಜೆಪಿ ನಾಯಕರು ಕೈಲಾಗದ ಮಾತು ಬಿಡಿ. ಜನರನ್ನು ಮತ್ತಷ್ಟು ನಿರಾಶರನ್ನಾಗಿಸಬೇಡಿ. ಜನರ ಆರೋಗ್ಯ, ಜೀವ ಮುಖ್ಯ. ಅದಕ್ಕಾಗಿ ಸಕಲವನ್ನೂ ಮಾಡಿ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. ‘ನಿಮ್ಮ ಕರ್ತ್ಯವ್ಯ ನೀವು ಮಾಡಿ.’ ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ ಎಂದು ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದರು.

Key words: Former CM –HD kumaraswamy- outrage – BJP leaders- statment

website developers in mysore