ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ: ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಪ್ರಯತ್ನ- ಹೆಚ್.ಡಿಕೆ ಕಿಡಿ.

ಬೆಂಗಳೂರು,ಮಾರ್ಚ್,23,2022(www.justkannada.in):  ಹಿಂದೂ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಪ್ರಯತ್ನ ನಡೆಯುತ್ತಿದೆ  ಭಾವನಾತ್ಮಕ ವಿಚಾರಗಳನ್ನು ಸೃಷ್ಟಿಸಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಾರೆಂದು ಮೂರು ನಾಲ್ಕು ತಿಂಗಳ‌ ಹಿಂದೆಯೇ ಹೇಳಿದ್ದೆ. ಉತ್ತರ ಭಾರತದ ಚುನಾವಣಾ ತಂತ್ರಗಾರಿಕೆಯನ್ನು ಕರ್ನಾಟಕದಲ್ಲಿ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪೆಟ್ರೋಲ್, ಡೀಸೆಲ್, ಗ್ಯಾಸ್, ಬೆಲೆ ಏರಿಕೆ ಬಗ್ಗೆ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬೆಲೆ ಏರಿಕೆ ಬಗ್ಗೆ ಯಾವುದೇ ವಿರೋಧ ಮಾಡ್ತಿಲ್ಲ. ಜನರಿಗೆ ಅದು ಬೇಕಾಗಿಲ್ಲ ಅನ್ನಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಏನು ಮಾಡೋಕೆ ಸಾಧ್ಯ? ಬೆಲೆ ಏರಿಕೆ ವಿರುದ್ಧ ಜನರೇ ಹೋರಾಟ ಮಾಡಬೇಕು. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು.‌‌ ಬೆಲೆ ಏರಿಕೆಯ ಬಗ್ಗೆ ನಾನು ಸದನದಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು  ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

Key words: Former CM-HD Kumaraswamy-outrage-bjp