ಪುಕ್ಕಟೆ ಅಕ್ಕಿ ಕೊಟ್ಟು ಭಿಕ್ಷುಕರಾಗಿ ಮಾಡಲ್ಲ: ಜನರನ್ನ ಸ್ವಾವಲಂಬಿ ಮಾಡ್ತೀನಿ- ಸಿದ್ಧರಾಮಯ್ಯ ಕಾಲೆಳೆದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

Promotion

ಮೈಸೂರು,ಅಕ್ಟೋಬರ್,12,2021(www.justkannada.in):  ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದು ಅನ್ನಭಾಗ್ಯ ಯೋಜನೆ ಬಗ್ಗೆ ಲೇವಡಿ ಮಾಡಿದ್ದಾರೆ.

ನಾನು ಆ ಭಾಗ್ಯ ಈ ಭಾಗ್ಯ ಅಂತಾ ಕೊಡಲ್ಲ ಪುಕ್ಕಟೆ ಅಕ್ಕಿ ಕೊಟ್ಟು ಭಿಕ್ಷುಕರನ್ನಾಗಿ ಮಾಡಲ್ಲ. ಜನರನ್ನ ಸ್ವಾವಲಂಭಿಗಳನ್ನಾಗಿ ಮಾಡುತ್ತೇನೆ. ಪಂಚರತ್ನ ಯೋಜನೆ ಮೂಲಕ ಸ್ವಾವಲಂಬಿಯಾಗಿ ಮಾಡುತ್ತೇನೆ. ನನಗೆ ಅವಕಾಶ ನೀಡಿ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಕಾಲೆಳೆದಿದ್ದಾರೆ.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಹೆಚ್.ಡಿ ಕುಮಾರಸ್ವಾಮಿ, ಕೊರೋನಾದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ರೆ ರಾಜ್ಯ ಸರ್ಕಾರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ. ರಾಜ್ಯ ಸರ್ಕಾರ ಜಾಹೀರಾತುನಲ್ಲೂ ಸುಳ್ಳು ಹೇಳುತ್ತಿದೆ ಎಂದು ಕಿಡಿಕಾರಿದರು.

Key words: Former CM-HD Kumaraswamy –Siddaramaiah-annabhagya-scheme