ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ…

Promotion

ಬೆಂಗಳೂರು,ಸೆ,4,2019(www.justkannada.in):  ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ  ಹೆಚ್. ಡಿ ಕುಮಾರಸ್ವಾಮಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಹಲಗೆ ವಡೇರಹಳ್ಳಿಯಲ್ಲಿನ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಅಕ್ಟೋಬರ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಮಾಡಲಾಗಿದೆ. 2007 ರಲ್ಲಿ ಕುಮಾರಸ್ವಾಮಿ ಮೊದಲ ಬಾರಿ ಸಿಎಂ ಆಗಿದ್ದ ವೇಳೆ ನಡೆದಿದೆ ಎನ್ನಲಾದ ಡಿನೋಟಿಫಿಕೇಷನ್ ಸಂಬಂಧ ಅ. 4 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ಹಲಗೆ ವಡೇರಹಳ್ಳಿಯ 2 ಎಕೆರೆ 34 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ 2012 ರಲ್ಲಿ ಅಧಿಕೃತವಾದ ದೂರು ದಾಖಲಾಗಿತ್ತು.

 

Key words: former CM -HD Kumaraswamy-Summons -issued – hearing.