ಇಂದಿನಿಂದ ನೆರೆ ಪೀಡಿತ ಪ್ರದೇಶಗಳಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರವಾಸ…

Promotion

ಬೆಳಗಾವಿ,ಅ,26,2019(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ಧರಾಮಯ್ಯ ಬೆನ್ನಲ್ಲೆ ಇದೀಗ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.

ಇಂದಿನಿಂದ ಮೂರು ದಿನಗಳ ಕಾಲ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಬೆಳಗಾವಿ, ಚಿಕ್ಕೋಡಿ, ಹುಕ್ಕೇರಿ, ಕಾಗವಾಡ, ಹಾವೇರಿ, ರಾಣಿಬೆನ್ನೂರು, ಅಥಣಿಯಲ್ಲಿ ಹೆಚ್.ಡಿಕೆ ಪ್ರವಾಸ ಕೈಗೊಂಡಿದ್ದಾರೆ.

ಪ್ರವಾಹ ಪರಿಶೀಲನೆ ವೇಳೆ ಅಧಿಕಾರಿಗಳ ಜತೆ ಹೆಚ್.ಡಿ ಕೆ ಸಭೆ ನಡೆಸಿ ಚರ್ಚಿಸಲಿದ್ದಾರೆ. ಇದರ ಜತೆಗೆ ಉಪಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಉಪಚುನಾವಣೆ ಕ್ಷೇತ್ರಗಳಲ್ಲಿ ಜೆಡಿಎಸ್ ಕಾರ್ಯಕರ್ತರ ಜತೆ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Former CM- HD Kumaraswamy -tour –flood –affected- areas – today.